ಮಂಗಳೂರು: ಮಾಜಿ ಉಪಮೇಯರ್ ಅನುಸೂಯ ಮಾಬೆನ್ ನಿಧನ

Update: 2022-11-16 10:02 GMT

ಮಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ, ಮಾಜಿ ಉಪ ಮೇಯರ್  ಅನುಸೂಯ ಮಾಬೆನ್  ನ. 15ರಂದು ಅಶೋಕ್ ನಗರದಲ್ಲಿರುವ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಅವರು ಓರ್ವ ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಅನೇಕ ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿಕೊಂಡು,1986-87 ಅವಧಿಗೆ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಉಪ ಮೇಯರ್ ಆಗಿ ಕಾರ್ಯನಿರ್ವಹಿಸಿದ್ದರು.

ಅವರ ನಿಧನಕ್ಕೆ ಮಾಜಿ ಕೇಂದ್ರ ಸಚಿವ ಬಿ. ಜನಾರ್ಧನ ಪೂಜಾರಿ, ಮಾಜಿ ಸಚಿವರಾದ ಯು. ಟಿ. ಖಾದರ್, ಬಿ. ರಮಾನಾಥ್ ರೈ, ಮಾಜಿ ಶಾಸಕ ಜೆ. ಆರ್. ಲೋಬೊ, ಮಾಜಿ ಎಂಎಲ್ ಸಿ ಐವನ್ ಡಿಸೋಜಾ, ಪಕ್ಷದ ಪ್ರಮುಖರಾದ ಶಶಿಧರ್ ಹೆಗ್ಡೆ, ವಿಶ್ವಾಸ ದಾಸ್, ಪ್ರಕಾಶ್ ಸಾಲ್ಯಾನ್, ಚೇತನ್ ಕುಮಾರ್, ಸತೀಶ್ ಪೂಜಾರಿ, ರೂಪಾ ಚೇತನ್ ಮೊದಲಾದವರು ಸಂತಾಪ ಸೂಚಿಸಿದ್ದಾರೆ.

Similar News