ಓಲಾ, ಉಬರ್ ಆಟೊ ಸೇವೆ ಸ್ಥಗಿತ: ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

Update: 2022-11-16 13:46 GMT

ಬೆಂಗಳೂರು, ನ. 16: ಓಲಾ, ಉಬರ್ ಹಾಗೂ ರ್ಯಾಪಿಡೋ ಆಟೊರಿಕ್ಷಾ ಸೇವೆ ದರ  ಹೆಚ್ಚಳಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ಸಲ್ಲಿಸಿರುವ ಮಧ್ಯಪ್ರವೇಶ ಮನವಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೀಡಿದೆ. ಮದ್ಯಂತರ ತಡೆಯಾಜ್ಞೆ ಮುಂದುವರಿಸಿದೆ.  

ಆ್ಯಪ್ ಮೂಲಕ ಆಟೊರಿಕ್ಷಾ ಸೇವೆ ನೀಡುವಂತಿಲ್ಲ. ತಕ್ಷಣ ಈ ಸೇವೆ ಸ್ಥಗಿತಗೊಳಿಸಬೇಕೆಂದು ರಾಜ್ಯ ಸರಕಾರ ಇತ್ತೀಚೆಗೆ ನಿರ್ದೇಶಿಸಿರುವ ಆಕ್ಷೇಪಾರ್ಹ ಆದೇಶ ವಜಾ ಮಾಡುವಂತೆ ಕೋರಿ ಆ್ಯಪ್ ಆಧಾರಿತ ಆಟೊ ರಿಕ್ಷಾ ಸೇವೆ(ಅಗ್ರಿಗೇಟರ್) ಕಂಪೆನಿಗಳು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ.ಸಿ.ಎಂ.ಪೂಣಚ್ಚ ಅವರಿದ್ದ ಏಕಸದಸ್ಯ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸಲು ಸರಕಾರಕ್ಕೆ ಸೂಚನೆ ನೀಡಿದೆ.

ಅಗ್ರಿಗೇಟರ್ ಕಂಪೆನಿಗಳು ಸಲ್ಲಿಸಿರುವ ಮಧ್ಯಪ್ರವೇಶ ಮನವಿಯಲ್ಲಿ ಕಚೇರಿ ಆಕ್ಷೇಪಣೆಗಳನ್ನು ಅರ್ಜಿದಾರರು ಸರಿಪಡಿಸಬೇಕು. ಸರಕಾರದ ವಕೀಲರು ಆ್ಯಪ್ ಆಧಾರಿತ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ್ದಾರೆ. ಇದಕ್ಕೆ ಅನುಮತಿ ನೀಡಲಾಗಿದೆ ಎಂದಿರುವ ನ್ಯಾಯಪೀಠವು ವಿಚಾರಣೆಯನ್ನು ಮುಂದೂಡಿತು. 

ಅರ್ಜಿದಾರರ ಪರ ಹಿರಿಯ ವಕೀಲರು ಹಾಗೂ ಸರಕಾರದ ವಕೀಲರ ವಾದಗಳನ್ನು ನ್ಯಾಯಪೀಠವು ಆಲಿಸಿತು. ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಸರಕಾರದ ಪರ ವಕೀಲರು ಕೋರಿದರು. ಆಗ ಪೀಠವು ನೀವು ಆಕ್ಷೇಪಣೆ ಸಲ್ಲಿಸಿ, ಅರ್ಜಿದಾರರ ಪರ ವಕೀಲರು ನ.21ರಂದು ವಾದ ಮಂಡಿಸಲಿ. ನ.22ರಂದು ನೀವು ವಾದ ಮಂಡಿಸಬಹುದು ಎಂದು ಹೇಳಿ ವಿಚಾರಣೆಯನ್ನು ಮುಂದೂಡಿತು.

Similar News