ಇಬ್ಬರು ಕೆಎಎಸ್ ಅಧಿಕಾರಿಗಳ ವರ್ಗಾವಣೆ
Update: 2022-11-16 21:53 IST
ಬೆಂಗಳೂರು, ನ. 16: ಇಬ್ಬರು ಕೆಎಎಸ್ ಅಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರ ಹೆಸರಿನ ಮುಂದಿನ ಸೂಚಿತ ಸ್ಥಳಕ್ಕೆ ನಿಯೋಜನೆಗೊಳ್ಳುವಂತೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಬುಧವಾರ ಆದೇಶ ಹೊರಡಿಸಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಎಸ್ಟೇಟ್ ಅಧಿಕಾರಿಯಾಗಿದ್ದ ಶಾಂತರಾಜು ವೈ.ಬಿ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಹುದ್ದೆಗೆ ಹಾಗೂ ಸ್ಥಳ ನಿರೀಕ್ಷೆಯಲ್ಲಿದ್ದ ಯಶೋಧ ಆರ್. ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಎಸ್ಟೇಟ್ ಅಧಿಕಾರಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.