ಅಮೆರಿಕ ಅಧ್ಯಕ್ಷ ಹುದ್ದೆಗೆ ಸ್ಪರ್ಧೆ: ಟ್ರಂಪ್ ಘೋಷಣೆ

Update: 2022-11-16 16:35 GMT

ವಾಷಿಂಗ್ಟನ್, ನ.16: ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump)ಘೋಷಿಸಿದ್ದು, ಅಮೆರಿಕದ ವಾಪಸಾತಿ ಇಂದಿನಿಂದ ಆರಂಭವಾಗಲಿದೆ ಎಂದು ತಮ್ಮ ಬೆಂಬಲಿಗರನ್ನುದ್ದೇಶಿಸಿ ಹೇಳಿದರು ಎಂದು ಮಾಧ್ಯಮಗಳು ವರದಿ ಮಾಡಿವೆ. 


ಹಾಲಿ ಅಧ್ಯಕ್ಷ ಜೋ ಬೈಡನ್(Joe Biden) ಮತ್ತೊಂದು ಅವಧಿಗೆ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರಿಯದಂತೆ ತಡೆಯುವ ಉದ್ದೇಶ ತಮ್ಮದು ಎಂದು ಟ್ರಂಪ್ ಘೋಷಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಬೈಡನ್ `ಈ ಹಿಂದೆ ಟ್ರಂಪ್ ತಮ್ಮ ದೇಶವನ್ನು ವಿಫಲಗೊಳಿಸಿದ್ದರು' ಎಂದು ಟ್ವೀಟ್ ಮಾಡಿದ್ದಾರೆ.

Similar News