×
Ad

ವೋಟರ್ ಐಡಿ ಮಾಹಿತಿ ಕಳವು ಪ್ರಕರಣದಲ್ಲಿ ಸರಕಾರದ ಕೈವಾಡ ಆರೋಪ; ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ ಕಾಂಗ್ರೆಸ್​

Update: 2022-11-17 13:54 IST

ಬೆಂಗಳೂರು: 'ಖಾಸಗಿ ಎನ್‌ಜಿಓ ಸಂಸ್ಥೆಯೊಂದು, ಸರಕಾರಿ ಅಧಿಕಾರಿಗಳ ಸೋಗಿನಲ್ಲಿ  ತನ್ನ ಏಜೆಂಟರ ಮೂಲಕ ಸಾವಿರಾರು ಮತದಾರರ ವೈಯಕ್ತಿಕ ಮಾಹಿತಿಗಳನ್ನು ಸಂಗ್ರಹಿಸಿರುವುದು ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿ ದುರ್ಬಳಕೆಯಾಗಿದೆ. ಈ ಪ್ರಕರಣದಲ್ಲಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅವರ ಜೊತೆ ಭಾಗಿಯಾಗಿರುವವರನ್ನು ಬಂಧಿಸಬೇಕು' ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಗುರುವಾರ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಳಿಕ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಯವರನ್ನು ಭೇಟಿ ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೆವಾಲಾ,  ಸಿಎಂ ಬಸವರಾಜ ಬೊಮ್ಮಾಯಿ, ಬಿಬಿಎಂಪಿ ಆಯುಕ್ತ ಮತ್ತು ಇತರ ಅಧಿಕಾರಿಗಳ ವಿರುದ್ಧ ಲಿಖಿತ ದೂರು ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ವಿಧಾನಸಭೆ ವಿಪಕ್ಷ ಉಪ ನಾಯಕ ಯು.ಟಿ ಖಾದರ್,  ಸಲೀಂ ಅಹ್ಮದ್​, ರಾಮಲಿಂಗಾರೆಡ್ಡಿ ಇತರರಿದ್ದರು. 

ಇದನ್ನೂ ಓದಿ... ಕಿರುಕುಳ ನೀಡಿದ್ದಕ್ಕೆ 10 ಜನ ಪಕ್ಷ ಬಿಟ್ಟು ಹೋದರು, ನನ್ನನ್ನು ಬಿಟ್ಟುಬಿಡಿ: ಕಣ್ಣೀರಿಟ್ಟ BJP ಶಾಸಕ ಎಸ್​.ಎ.ರಾಮದಾಸ್

Similar News