ವೋಟರ್ ಐಡಿ ಮಾಹಿತಿ ಕಳವು ಪ್ರಕರಣದಲ್ಲಿ ಸರಕಾರದ ಕೈವಾಡ ಆರೋಪ; ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ಏನು?

Update: 2022-11-17 08:37 GMT

ಬೆಂಗಳೂರು, ನ. 17: ಮತದಾರರ ಸಮೀಕ್ಷೆ ಹೆಸರಿನಲ್ಲಿ ಖಾಸಗೀತನಕ್ಕೆ ಕನ್ನ ಹಾಕಲಾಗಿದೆ ಎಂಬ ಕಾಂಗ್ರೆಸ್ ಆರೋಪದ ಬಗ್ಗೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಪ್ರತಿಕ್ರಿಯಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ' ಕಾಂಗ್ರೆಸ್ ನವರು ತಮ್ಮ  ವಿಚಾರಗಳಲ್ಲಿ ದಿವಾಳಿಯಾಗಿದ್ದಾರೆ' ಎಂದು ಹೇಳಿದರು. 

''ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮ ಕೈಗೊಳ್ಳಲು  ಬಿಬಿಎಂಪಿ ಹಾಗೂ ಸ್ಥಳೀಯ ಸಂಸ್ಥೆಗಳಿಗೆ  ವಹಿಸಿರುತ್ತಾರೆ. ಅವರು ಸಮೀಕ್ಷಾ ಕೆಲಸವನ್ನು ಎನ್.ಜಿ.ಓ ಗಳಿಗೆ ನೀಡಿರುತ್ತಾರೆ. ಇದೇನು ಮೊದಲ ಬಾರಿ ನೀಡಿರುವುದಲ್ಲ.  2018 ರಲ್ಲಿ ಇದ್ದ ಸರ್ಕಾರದ ಕಾಲದಲ್ಲಿಯೂ ನೀಡಿದ್ದಾರೆ.  ಎನ್.ಜಿ.ಒ. ಬಿ.ಎಲ್.ಡಿ ದುರ್ಬಳಕೆ ಮಾಡಿದ್ದಾರೆ. ಆದ್ದರಿಂದ ಚುನಾವಣಾ ಆಯೋಗ ನೀಡಿರುವ ಆದೇಶದಿಂದ ಮೊದಲುಗೊಂಡು  ಇಡೀ ಪ್ರಕರಣದ ಸಮಗ್ರ ತನಿಖೆಗೆ ಸೂಚನೆ ನೀಡುತ್ತೇನೆ. ನಿಜ ಹೊರಗೆ ಬರಲಿ'' ಎಂದರು. 

ಆಧಾರರಹಿತ ಆರೋಪ: 'ಕಾಂಗ್ರೆಸ್ ರಾಜೀನಾಮೆಗೆ ಒತ್ತಾಯಿಸುವುದು  ಹಾಸ್ಯಾಸ್ಪದ. ಸಂಬಂಧವಿಲ್ಲದ್ದನ್ನು ಕೇಳುತ್ತಿದ್ದಾರೆ. ಅದೇ ಮಾನದಂಡವಾದರೆ ಕಾಂಗ್ರೆಸ್ ಮುಖ್ಯಮಂತ್ರಿಗಳು ಈವರೆಗೆ ಮೂರು ಬಾರಿ ರಾಜೀನಾಮೆ ನೀಡಬೇಕಿತ್ತು. ಇದೊಂದು ಆಧಾರರಹಿತ ಆರೋಪ' ಎಂದರು.

Similar News