ಟಿಎಂಸಿ ಸಂಸದನ ಕಾರು ಢಿಕ್ಕಿಯಾಗಿ 6 ವರ್ಷದ ಬಾಲಕ ಮೃತ್ಯು

Update: 2022-11-17 08:39 GMT

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ತೃಣಮೂಲ ಕಾಂಗ್ರೆಸ್ ಸಂಸದ ಅಬು ತಾಹೆರ್ ಖಾನ್ ಅವರು ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿ ಹೊಡೆದು ಆರು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಬುಧವಾರದಂದು ನಡೆದಿದೆ.

ಸ್ಥಳೀಯ ಮಾಧ್ಯಮಗಳ ಪ್ರಕಾರ ಖಾನ್ ಅವರು ನೌಡಾ ಪ್ರದೇಶದಿಂದ ಬರ್ಹಾಂಪೋರ್ ಪಟ್ಟಣಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಪಿಪ್ರೆಖಾಲಿ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ. ಸಾವಿನ ಸುದ್ದಿ ಗೊತ್ತಾಗುತ್ತಿದ್ದಂತೆ, ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ರಸ್ತೆ ತಡೆದು ಆಕ್ರೋಶ ಹೊರ ಹಾಕಿದ್ದಾರೆ.

 ಪೊಲೀಸರು ಕಾರು ಚಾಲಕನನ್ನು ಬಂಧಿಸಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

 "ತೀವ್ರವಾಗಿ ಗಾಯಗೊಂಡ ಬಾಲಕನನ್ನು ಸಂಸದರು   ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಆತ ಮೃತಪಟ್ಟಿದ್ದಾನೆ ಎಂದು ಘೋಷಿಸಲಾಯಿತು. ಕಾರು ಚಾಲಕ ಅಲಂಗೀರ್ ಮೊಂಡಲ್ ನನ್ನು ಬಂಧಿಸಿ ವಾಹನವನ್ನು ವಶಪಡಿಸಿಕೊಂಡಿದ್ದೇವೆ. ಪ್ರಕರಣವನ್ನೂ ದಾಖಲಿಸಲಾಗಿದೆ' ಎಂದು ಹಿರಿಯ ಜಿಲ್ಲಾ ಪೊಲೀಸ್ ಅಧಿಕಾರಿಯೊಬ್ಬರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಸಂಸದರ ಕಾರು ವೇಗವಾಗಿ ಚಲಿಸುತ್ತಿತ್ತು ಎಂದು ಬಾಲಕನ ತಂದೆ ಹಮೀದುಲ್ ಆರೋಪಿಸಿದ್ದಾರೆ.

Similar News