ಮಂಜೇಶ್ವರ: ಮದ್ರಸಕ್ಕೆ ತೆರಳುತ್ತಿದ್ದ ಬಾಲಕಿಯನ್ನು ಎತ್ತಿ ಎಸೆದ ಯುವಕ !

► ಆರೋಪಿ ಸೆರೆ ►ವೀಡಿಯೊ ವೈರಲ್

Update: 2022-11-17 11:47 GMT

ಕಾಸರಗೋಡು: ಮದ್ರಸಕ್ಕೆ ತೆರಳುತ್ತಿದ್ದ ಬಾಲಕಿಯನ್ನು ಯುವಕನೋರ್ವ ಎತ್ತಿ ಎಸೆದ ಅಮಾನವೀಯ ಘಟನೆ ಮಂಜೇಶ್ವರದಲ್ಲಿ  ನಡೆದಿದೆ.

ಆರೋಪಿ ಮಂಜೇಶ್ವರ ಕುಂಜತ್ತೂರಿನ ಅಬೂಬಕ್ಕರ್ ಸಿದ್ದೀಕ್ (30) ಎಂದು ಗುರುತಿಸಲಾಗಿದ್ದು, ಮಂಜೇಶ್ವರ ಠಾಣೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಗುರುವಾರ ಬೆಳಗ್ಗೆ ಏಳು ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಗಾಯಗೊಂಡಿರುವ 9ರ ಹರೆಯದ ಬಾಲಕಿಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮದ್ರಸಕ್ಕೆ ತೆರಳುತ್ತಿದ್ದ ಬಾಲಕಿಯ ಹತ್ತಿರ ಬಂದ ಈತ ಬಾಲಕಿಯನ್ನು ಮೇಲಕ್ಕೆತ್ತಿ ಎಸೆದಿದ್ದು, ಕೃತ್ಯದ ಬಳಿಕ ಆರೋಪಿ ಅಲ್ಲಿಂದ ತೆರಳಿದ್ದನು. ಬಾಲಕಿಯ ಸಹಪಾಠಿಗಳ ಕಣ್ಮುಂದೆಯೇ ಈ ಘಟನೆ ನಡೆದಿದೆ.

ಬಾಲಕಿಯ ಪೋಷಕರು ನೀಡಿದ ದೂರಿನಂತೆ ಮಂಜೇಶ್ವರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಿಸಿಟಿವಿ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆಕ್ರೋಶ ವ್ಯಕ್ತವಾಗಿದೆ. ಘಟನೆಯನ್ನು   ರಾಜ್ಯ ಸರಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ವಿ. ಶಿವನ್ ಕುಟ್ಟಿ ತಿಳಿಸಿದ್ದಾರೆ.

Similar News