×
Ad

ರಸ್ತೆಗುಂಡಿ ಮುಚ್ಚಲು ಸರಕಾರ ವಿಫಲ: ನ.19ಕ್ಕೆ ಆಪ್ ನಿಂದ ವಿಧಾನಸೌಧಕ್ಕೆ ಮುತ್ತಿಗೆ

Update: 2022-11-17 17:31 IST

ಬೆಂಗಳೂರು, ನ. 17: ರಸ್ತೆ ಗುಂಡಿಗಳಿಗೆ ವಾಹನ ಸವಾರರು ಬಲಿಯಾಗುತ್ತಿರುವ ಪ್ರಕರಣಗಳು ಏರಿಕೆಯಾಗುತ್ತಿದ್ದರೂ, ರಸ್ತೆಗುಂಡಿ ಮುಚ್ಚಲು ರಾಜ್ಯ ಬಿಜೆಪಿ ಸರಕಾರವು ವಿಳಂಬ ಮಾಡುತ್ತಿದೆ. ಇದನ್ನು ಖಂಡಿಸಿ, ಆಮ್ ಆದ್ಮಿ ಪಾರ್ಟಿಯು ನ.19ಕ್ಕೆ ವಿಧಾನಸೌಧ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದೆ. 

ಗುರುವಾರ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಎಎಪಿ ಮುಖಂಡ ಮೋಹನ್ ದಾಸರಿ, ಇತ್ತೀಚಿನ ದಿನಗಳಲ್ಲಿ ರಸ್ತೆಗುಂಡಿಗಳಿಂದಾಗಿ ಅಪಘಾತಗಳು, ಗಾಯಗಳು, ಸಾವುಗಳು ಸಾಮಾನ್ಯವಾಗಿವೆ. ಸರಕಾರದ ನಿರ್ಲಕ್ಷ್ಯ ಹಾಗೂ ಭ್ರಷ್ಟಾಚಾರದಿಂದಾಗಿ ಅಮಾಯಕ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆಗುಂಡಿಗಳಿಗೆ ಕಾರಣರಾದವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ತು ಈ ಸರಕಾರಕ್ಕೆ ಇಲ್ಲ ಎಂದು ಹೇಳಿದರು.

ರಸ್ತೆಗುಂಡಿಗೆ ಬಲಿಯಾದವರ ಕುಟುಂಬ ಈ ಪ್ರತಿಭಟನೆಯಲ್ಲಿ ಭಾಗವಹಿಸಿ, ನ್ಯಾಯಕ್ಕಾಗಿ ಸರಕಾರವನ್ನು ಆಗ್ರಹಿಸಲಿದ್ದಾರೆ. ಸಾಮಾಜಿಕ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಹಾಗೂ ನಾಗರಿಕ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ನಮ್ಮ ಈ ಜನಪರ ಹೋರಾಟಕ್ಕೆ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು. 

Similar News