ದ.ಕ.ಜಿಲ್ಲಾ ಮಟ್ಟದ ಕ್ರೀಡಾಕೂಟ: ಮುಹಮ್ಮದ್ ಇಸಾಕ್‌ಗೆ ಚಿನ್ನದ ಪದಕ

Update: 2022-11-17 14:02 GMT

ಮಂಗಳೂರು: ನಗರದ ಅತ್ತಾವರ ಸರಕಾರಿ ಪ್ರೌಢ ಶಾಲೆಯಲ್ಲಿ ಇತ್ತೀಚೆಗೆ ನಡೆದ ದ.ಕ.ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ವಾಮಂಜೂರಿನ ವಿದ್ಯಾ ಜ್ಯೋತಿ ಶಾಲೆಯ ವಿದ್ಯಾರ್ಥಿ ಮುಹಮ್ಮದ್ ಇಸಾಕ್ ಎತ್ತರ ಜಿಗಿತದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.

ಮೂಡುಶೆಡ್ಡೆ ಸಮೀಪದ ಎದುರುಪದವು ನಿವಾಸಿ ಇಕ್ಬಾಲ್-ಅವ್ವಮ್ಮ ದಂಪತಿಯ ಪುತ್ರನಾಗಿರುವ ಮುಹಮ್ಮದ್ ಇಸಾಕ್ ಮೈಸೂರಿನಲ್ಲಿ ನಡೆಯುವ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Similar News