ಜಯಾನಂದ ಕುಮಾರ್‌ಗೆ ‘ಕನಕದಾಸ ಪ್ರಶಸ್ತಿ’ ಪ್ರದಾನ

Update: 2022-11-17 14:35 GMT

ಮಂಗಳೂರು: ನಗರದ ಕಲ್ಕೂರ ಪ್ರತಿಷ್ಠಾನದ ವತಿಯಿಂದ ಕದ್ರಿ ಕಂಬಳದ ಮಂಜುಪ್ರಸಾದದ ವಾದಿರಾಜ ಮಂಟಪದ ವಿಶ್ವೇಶತೀರ್ಥ ವೇದಿಕೆಯಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ ಅವರಿಗೆ ‘ಕನಕದಾಸ ಪ್ರಶಸ್ತಿ’ ಪ್ರದಾನ ಮಾಡಲಾಯಿತು.

ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ ‘ಕನಕದಾಸರ ಜೀವನ ದರ್ಶನ’ದ ಕುರಿತಾಗಿ ಉಪನ್ಯಾಸ ನೀಡಿದರು.

ಶಾಸಕ ವೇದವ್ಯಾಸ ಕಾಮತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಶಾರದಾ ವಿದ್ಯಾಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ.ಬಿ. ಪುರಾಣಿಕ್, ಕಾರ್ಪೋರೇಟರ್‌ಗಳಾದ ಮನೋಹರ ಶೆಟ್ಟಿ, ಶಕೀಲಾ ಕಾವ, ಪ್ರಮುಖರಾದ ಶಿವರಾಮ ಕಾಸರಗೋಡು, ಚಂದ್ರಶೇಖರ ಶೆಟ್ಟಿ ಉಪಸ್ಥಿತರಿದ್ದರು.

Similar News