×
Ad

ಎನ್‌ಜಿಓದಿಂದ ಮತದಾರರ ಮಾಹಿತಿ ಕಳವು: ತನಿಖೆಗೆ ಪ್ರಾದೇಶಿಕ ಆಯುಕ್ತರಿಗೆ ಚುನಾವಣಾ ಆಯೋಗ ಸೂಚನೆ

Update: 2022-11-17 22:20 IST

ಬೆಂಗಳೂರು, ನ. 17: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸಂಬಂಧ ‘ಚಿಲುಮೆ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಹಾಗೂ ಗ್ರಾಮೀಭಿವೃದ್ಧಿ ಸಂಸ್ಥೆ’ ಷರತ್ತು ಉಲ್ಲಂಘನೆ ಹಿನ್ನೆಲೆಯಲ್ಲಿ ಅನುಮತಿ ರದ್ದುಪಡಿಸಿದೆ. ಸದರಿ ಸಂಸ್ಥೆ ವಿರುದ್ಧ ಇಲ್ಲಿನ ಕಾಡುಗೋಡಿ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಈ ಕುರಿತು ತನಿಖೆ ನಡೆಸಲು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಸೂಚಿಸಿದ್ದಾರೆ.

ಈ ಮಧ್ಯೆ ಬಿಬಿಎಂಪಿ ಮುಖ್ಯ ಆಯುಕ್ತರು, ‘ಚಿಲುಮೆ ಸಂಸ್ಥೆ ಮತದಾರರ ವೈಯಕ್ತಿಕ ಮಾಹಿತಿ ಸಂಗ್ರಹಿಸುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಆ ಸಂಸ್ಥೆಗೆ ನೀಡಿದ್ದ ಅನುಮತಿ ಪತ್ರವನ್ನು ರದ್ದುಪಡಿಸಲಾಗಿದೆ. ಅಲ್ಲದೆ, ಜಿಲ್ಲಾ ಚುನಾವಣಾಧಿಕಾರಿಗಳು ಈ ಬಗ್ಗೆ ಮತ್ತೊಮ್ಮೆ ಪರಿಶೀಲಿಸಿ, ವಿಚಾರಣೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ’ ಎಂದು ತಿಳಿಸಿದ್ದಾರೆ.

Similar News