ತುಂಬೆ | ಅಪ್ರಾಪ್ತ ವಯಸ್ಸಿನ ಮಲಮಗಳ ಮೇಲೆ ಅತ್ಯಾಚಾರ: ಆರೋಪಿ ಅರ್ಚಕನ ಬಂಧನ

Update: 2022-11-18 07:36 GMT

ಬಂಟ್ವಾಳ, ನ.18: ಅಪ್ರಾಪ್ತ ವಯಸ್ಸಿನ ಮಲಮಗಳ ಮೇಲೆ ಅತ್ಯಾಚಾರ(Rape) ಎಸಗಿ ಆಕೆ ಗರ್ಭಿಣಿಯಾಗಲು ಕಾರಣವಾದ ಆರೋಪದಲ್ಲಿ ತುಂಬೆಯ ದೇವಸ್ಥಾನವೊಂದರ ಅರ್ಚಕನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ತುಂಬೆ ರಾಮ ನಿವಾಸ ನಿವಾಸಿ ವೆಂಕಟೇಶ ಕಾರಂತ ಬಂಧಿತ ಆರೋಪಿ. ಈತ ತುಂಬೆಯ ದೇವಸ್ಥಾನವೊಂದರಲ್ಲಿ ಅರ್ಚಕ ನಾಗಿದ್ದು, ಮಲಮಗಳ ಮೇಲೆಯೇ ಹಲವು ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಬಾಲಕಿಯ ತಂದೆ ಅಪಘಾತದಲ್ಲಿ ಮರಣ ಹೊಂದಿದ ನಂತರ ಬಾಲಕಿಯ ತಾಯಿ ವೆಂಕಟೇಶ್ ನನ್ನು ಎರಡನೇ ಮದುವೆಯಾಗಿದ್ದು, ಬಾಲಕಿಯ ಇವರ ಜೊತೆಯಲ್ಲಿ ವಾಸವಾಗಿದ್ದಳು. ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು 4 ತಿಂಗಳ ಗರ್ಭವತಿ ಮಾಡಿದ ಆರೋಪದಲ್ಲಿ ವೆಂಕಟೇಶ ಕಾರಂತನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿ ಪೊಕ್ಸೊ ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Similar News