ಬೆಳಗಾವಿ: ಜಲಾಶಯದ ಹಿನ್ನೀರಿನಲ್ಲಿ ತಾಯಿ, ಇಬ್ಬರು ಮಕ್ಕಳ ಮೃತದೇಹ ಪತ್ತೆ

Update: 2022-11-19 04:37 GMT

ಬೆಳಗಾವಿ: ಜಿಲ್ಲೆಯ ಸವದತ್ತಿ ಪಟ್ಟಣದ ಹೊರ ವಲಯದಲ್ಲಿರುವ ನವಿಲು ತೀರ್ಥ ಜಲಾಶಯದ ಹಿನ್ನೀರಿನಲ್ಲಿ ತಾಯಿ ಸಹಿತ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವುದಾಗಿ ವರದಿಯಾಗಿದೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ‌ ಚುಂಚನೂರು ಗ್ರಾಮದ  ನಿವಾಸಿಗಳಾದ ತನುಜಾ ಪರಸಪ್ಪ ಗೋಡಿ(32), ಸುದೀಪ್(4), ರಾಧಿಕಾ(3) ಮೃತಪಟ್ಟವರು.

ಸವದತ್ತಿ ತಾಲೂಕು ಆಸ್ಪತ್ರೆಗೆ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Similar News