ದಿಲ್ಲಿ ಸಚಿವ ಸತ್ಯೇಂದ್ರ ಜೈನ್‌ ಗೆ ಜೈಲಿನಲ್ಲಿ ಮಸಾಜ್:‌ ವಿವಾದಾತ್ಮಕ ವೀಡಿಯೊ ವೈರಲ್

Update: 2022-11-19 07:32 GMT

ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮೇ ತಿಂಗಳಲ್ಲಿ ಬಂಧಿತರಾಗಿರುವ ದಿಲ್ಲಿ ಸಚಿವ ಸತ್ಯೇಂದ್ರ ಜೈನ್ ಅವರು ದಿಲ್ಲಿಯ ತಿಹಾರ್ ಜೈಲಿನಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋ ಕುರಿತು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ವಿರುದ್ಧ ಬಿಜೆಪಿ ಇಂದು ವಾಗ್ದಾಳಿ ನಡೆಸಿದೆ.

ಹಲವಾರು ಪಕ್ಷದ ನಾಯಕರು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಕ್ಲಿಪ್ ಅನ್ನು ಹಂಚಿಕೊಂಡಿದ್ದಾರೆ. ಜೈನ್ ಅವರಿಗೆ ಜೈಲಿನಲ್ಲಿ ವಿಶೇಷ ಪ್ರಾತಿನಿಧ್ಯ ನೀಡುತ್ತಾರೆ ಎಂಬ ಬಿಜೆಪಿ ಆರೋಪವನ್ನು ಪುನರುಚ್ಚರಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಯೊಬ್ಬರು ಚಿಕಿತ್ಸೆ ಪಡೆಯುತ್ತಿರುವ ದೃಶ್ಯವನ್ನು ಪ್ರದರ್ಶಿಸಿದ ಬಿಜೆಪಿಯನ್ನು 'ನಾಚಿಕೆಯಿಲ್ಲದವರು' ಎಂದು ಆಮ್‌ ಆದ್ಮಿ ಪಕ್ಷ ಟೀಕಿಸಿದೆ.

ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾತನಾಡಿ, ಸತ್ಯೇಂದ್ರ ಜೈನ್ ಅವರು ಜೈಲಿನಲ್ಲಿ ಗಾಯಗೊಂಡ ನಂತರ ಎರಡು ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಆಸ್ಪತ್ರೆಯಿಂದ ಫಿಸಿಯೋಥೆರಪಿಗೆ ಸಲಹೆ ನೀಡಲಾಯಿತು ಎಂದಿದ್ದಾರೆ.

ಆಮ್ ಆದ್ಮಿ ಪಕ್ಷ (ಎಎಪಿ) ಸ್ಪಾ ಮತ್ತು ಮಸಾಜ್ ಪಾರ್ಟಿಯಾಗಿ ಮಾರ್ಪಟ್ಟಿದೆ ಎಂದು ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಟೀಕಿಸಿದ್ದಾರೆ. ‘ವಿಐಪಿ ಸಂಸ್ಕೃತಿ’ಯಲ್ಲಿ ಎಎಪಿ ಬೂಟಾಟಿಕೆ ಮಾಡಿದೆ ಎಂದು ಆರೋಪಿಸಿದ್ದಾರೆ.

Similar News