MEIF ವತಿಯಿಂದ SSLC ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ

Update: 2022-11-19 11:55 GMT

ಕೋಡಿ: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ ದ.ಕ, ಉಡುಪಿ ಜಿಲ್ಲೆ (MEIF) ವತಿಯಿಂದ ಉಡುಪಿ ಝೋನ್ (ಶಿರೂರು, ಗಂಗೊಳ್ಳಿ, ಕಂಡ್ಲೂರು, ಉದ್ಯಾವರ, ಹೂಡೆ, ಉಡುಪಿ, ಕೊಡಿ-ಕುಂದಾಪುರ) ಪ್ರದೇಶದ ವಿದ್ಯಾ ಸಂಸ್ಥೆಗಳ 315 ವಿದ್ಯಾರ್ಥಿಗಳಿಗೆ ಒಂದು ದಿನದ ಕಾರ್ಯಾಗಾರವು ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ಕುಂದಾಪುರ ಕೋಡಿಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಬ್ಯಾರೀಸ್ ಸಮೂಹ  ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಕೆ.ಎಂ. ಅಬ್ದುಲ್ ರಹ್ಮಾನ್ ಬ್ಯಾರಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಬ್ಯಾರೀಸ್ ಸಮೂಹ ಸಂಸ್ಥೆಗಳ ಟ್ರಸ್ಟಿ ಅಬೂಬಕರ್ ಸಿದ್ದೀಕ್ ಬ್ಯಾರಿ ಅವರು ಭಾಗವಹಿಸಿ, ಶಿಕ್ಷಣದ ಮಹತ್ವದ ಬಗ್ಗೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.  MEIF ಅಧ್ಯಕ್ಷರಾದ ಮೂಸಬ್ಬ ಪಿ. ಬ್ಯಾರಿ ಜೋಕಟ್ಟೆ, ಪ್ರಸಕ್ತ ಸಾಲಿನಲ್ಲಿ ಉಭಯ ಜಿಲ್ಲೆಗಳಲ್ಲಿ MEIF ವಿದ್ಯಾ ಸಂಸ್ಥೆಗಳನ್ನೊಳಗೊಂಡ SSLC ವಿದ್ಯಾರ್ಥಿಗಳಿಗೆ ಕಾರ್ಯಾಗಾರವನ್ನು ಏರ್ಪಡಿಸಲು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅದರ ಪ್ರಥಮ ಭಾಗವಾಗಿ ಇಂದು ಕುಂದಾಪುರದ ಕೋಡಿಯಲ್ಲಿ ಈ ಕಾರ್ಯಾಗಾರವನ್ನು ಆರಂಭಿಸಿರುವುದಾಗಿ ತಿಳಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಿ, ಪರೀಕ್ಷೆ ಎದುರಿಸುವ ವಿಧಿ ವಿಧಾನಗಳು ಹಾಗೂ ವಿಶೇಷವಾಗಿ ಗಣಿತ ಮತ್ತು ವಿಜ್ಞಾನ ವಿಷಯದಲ್ಲಿ ಸರಳ ಕಲಿಕಾ ಕಲೆಗಳ ಬಗ್ಗೆ, ಸಂಪನ್ಮೂಲ ವ್ಯಕ್ತಿಯಾಗಿ ರಾಷ್ಟ್ರೀಯ ತರಬೇತಿದಾರರಾದ ಪ್ರೊ.ರಾಜೇಂದ್ರ ಭಟ್ ಅವರು ಕಾರ್ಯಾಗಾರ ನೆರವೇರಿಸಿದರು.

MEIF ಉಡುಪಿ ಝೋನಲ್ ಉಪಾಧ್ಯಕ್ಷರಾದ ಶಾಬೀಹ್ ಅಹ್ಮದ್ ಖಾಝಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬ್ಯಾರೀಸ್ PTA ಮುಖ್ಯ ಸಲಹೆಗಾರರಾದ ಹಾಜಿ ಅಬೂ ಶೇಕ್ ಸಾಹೇಬ್ ಉಪಸ್ಥಿತರಿದ್ದರು.

ಆರಂಭದಲ್ಲಿ ಬ್ಯಾರೀಸ್ ಪಬ್ಲಿಕ್ ಸ್ಕೂಲ್ ಇದರ ಪ್ರಾಂಶುಪಾಲರಾದ ಅಶ್ವಿನಿ ಶೆಟ್ಟಿ ಸ್ವಾಗತಿಸಿದರು. ಸಹಾಯಕ ಶಿಕ್ಷಕಿ ಜೆನಿಫರ್ ಲೂಯಿಸ್ ಕಾರ್ಯಕ್ರಮ ನಿರೂಪಿಸಿದರು. MEIF ಉಡುಪಿ ಝೋನಲ್ ಕನ್ವೀನರ್ ಅಬ್ದುಲ್ ರಹ್ಮಾನ್ ಮಣಿಪಾಲ್ ವಂದಿಸಿದರು. ಕಾರ್ಯಕ್ರಮದ ಪ್ರಾಯೋಜಕತ್ವವನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆ ವಹಿಸಿತ್ತು.

Similar News