ಮೀನುಗಾರರ ಮಕ್ಕಳಿಗೆ ಶಿಷ್ಯವೇತನ: ಅರ್ಜಿ ಆಹ್ವಾನ
Update: 2022-11-19 19:15 IST
ಉಡುಪಿ, ನ.19: ಮೀನುಗಾರಿಕಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯನ್ನು ಮುಖ್ಯಮಂತ್ರಿಗಳು ಘೋಷಿಸಿದ್ದು, ಈ ಯೋಜನೆಯ ಸೌಲಭ್ಯ ಪಡೆಯಲು ಮೀನುಗಾರರ ಮಕ್ಕಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
8, 9, 10, ಪಿಯುಸಿ, ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಮೀನುಗಾರರ ಸಹಕಾರಿ ಸಂಘದ ಸದಸ್ಯರು ಹಾಗೂ ಮೀನು ಕೃಷಿಕರ ಮಕ್ಕಳು ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಸಂಬಂಧಪಟ್ಟ ಮೀನುಗಾರರ ಸಹಕಾರಿ ಸಂಘಗಳಿಂದ ಮಾಹಿತಿ ಪಡೆದು, ಫ್ರುಟ್ಸ್ ಐಟಿಯನ್ನು ನ.28ರೊಳಗೆ ಮಾಡಿಕೊಳ್ಳಬಹುದಾಗಿದೆ.
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.