ನ.22 ರಂದು ಬಿಜೆಪಿ ರಾಜ್ಯ ಯುವ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ

Update: 2022-11-19 14:52 GMT

ಉಡುಪಿ, ನ.20: ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಆಶ್ರಯ ದಲ್ಲಿ ಯುವ ಮೋರ್ಚಾ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯು ನ.22 ರಂದು ಬೆಳಿಗ್ಗೆ 10 ಗಂಟೆಗೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣ ದಲ್ಲಿ ನಡೆಯಲಿದೆ ಎಂದು ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷ ವಿಖ್ಯಾತ್ ಶೆಟ್ಟಿ ತಿಳಿಸಿದ್ದಾರೆ.

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್ ಅಧ್ಯಕ್ಷತೆ ಯಲ್ಲಿ ನಡೆಯಲಿರುವ ಸಭೆಯನ್ನು ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಉದ್ಘಾಟಿಸಲಿದ್ದಾರೆ. ನ.21ರಂದು ಸಂಜೆ 6 ಗಂಟೆಗೆ ಬಿಜೆಪಿ ಯುವ ಮೋರ್ಚಾ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಲಿದೆ ಎಂದರು.

ಬೆಳಗ್ಗೆ 9ಗಂಟೆಗೆ ಉಡುಪಿಯ ಜೋಡುಕಟ್ಟೆಯಿಂದ ಮಣಿಪಾಲದ ರಜತಾದ್ರಿಯವರೆಗೆ ಬೈಕ್ ರ್ಯಾಲಿ ನಡೆಯಲಿದೆ. ಬಳಿಕ ರಜತಾದ್ರಿ ಮುಂಭಾಗ ದಲ್ಲಿರುವ ಡಾ.ವಿ.ಎಸ್.ಆಚಾರ್ಯರವರ ಪುತ್ಥಳಿಗೆ ಮಾಲಾರ್ಪಣೆ ಗೈದು ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದವರೆಗೆ ಕಾಲ್ನಡಿಗೆ ಜಾಥಾ ನಡೆಯಲಿದೆ.

ಈ ವಿಶೇಷ ಕಾರ್ಯಕಾರಿಣಿ ಸಭೆಗೆ ರಾಜ್ಯ ಯುವ ಮೋರ್ಚಾ ಪದಾಧಿಕಾರಿ ಗಳು ಹಾಗೂ ರಾಜ್ಯದ ಎಲ್ಲಾ 39 ಸಂಘಟನಾತ್ಮಕ ಜಿಲ್ಲೆಗಳ ಯುವ ಮೋರ್ಚಾ ಜಿಲ್ಲಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಒಟ್ಟು 163 ಮಂದಿ ಭಾಗವಹಿಸಲಿರುವರು ಎಂದು ಅವರು ಮಾಹಿತಿ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಅಕ್ಷಿತ್ ಶೆಟ್ಟಿ ಹೆರ್ಗ, ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಶರತ್ ಶೆಟ್ಟಿ ಉಪ್ಪುಂದ, ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಯುವ ಮೋರ್ಚಾ ಜಿಲ್ಲಾ ಕಾರ್ಯ ದರ್ಶಿ ಸತೀಶ್ ಪೂಜಾರಿ ಉದ್ಯಾವರ ಮತ್ತು ಅಭಿರಾಜ್ ಸುವರ್ಣ ಉಪಸ್ಥಿತರಿದ್ದರು.

Similar News