‘ಭಾರತ್ ಜೋಡೊ ಯಾತ್ರೆ’ಗೆ ಬಾಂಬ್ ಬೆದರಿಕೆ: ಇಬ್ಬರ ಬಂಧನ; ಮೂವರ ಗುರುತು ಪತ್ತೆ

Update: 2022-11-19 18:01 GMT

ಭೋಪಾಲ, ನ. 19:  ಕಾಂಗ್ರೆಸ್‌ನ ‘ಭಾರತ್ ಜೋಡೊ ಯಾತ್ರೆ’ ನವೆಂಬರ್ 28ರಂದು ಇಂದೋರ್‌ನಲ್ಲಿ ಇರುವಾಗ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಒಡ್ಡಿರುವುದಕ್ಕೆ ಸಂಬಂಧಿಸಿ ಮಧ್ಯಪ್ರದೇಶ ಪೊಲೀಸರು ಶನಿವಾರ ಇಬ್ಬರನ್ನು ಬಂಧಿಸಿದ್ದಾರೆ. 

ಬೆದರಿಕೆಗೆ ಸಂಬಂಧ ಹೊಂದಿದ್ದಾರೆ ಎಂದು ಹೇಳಲಾದ ಮತ್ತೆ ಮೂವರು ವ್ಯಕ್ತಿಗಳನ್ನು ಗುರುತಿಸಲಾಗಿದೆ. ಅವರನ್ನು ವಶಕ್ಕೆ ತೆಗೆದುಕೊಳ್ಳಲು  ಪೊಲೀಸರ ತಂಡ ಹರ್ಯಾಣಕ್ಕೆ ತೆರಳಿದೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ ಮಿಶ್ರಾ ಅವರು ತಿಳಿಸಿದ್ದಾರೆ. 

ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 507ರ ಅಡಿಯಲ್ಲಿ ಪ್ರಥಮ ಮಾಹಿತಿ ವರದಿ ದಾಖಲಿಸಲಾಗಿದೆ. 

ಇಂದೋರ್‌ನ ಖಾಲ್ಸಾ ಮೈದಾನದಲ್ಲಿ ನವೆಂಬರ್ 28ರಂದು ಬಾಂಬ್ ಸ್ಫೋಟಿಸುವ ಬೆದರಿಕೆಯ ಅನಾಮಿಕ ಪತ್ರ ಈ ವಾರದ ಆರಂಭದಲ್ಲಿ ಬೆಳಕಿಗೆ ಬಂದಿತ್ತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಮಧ್ಯಪ್ರದೇಶದ ಪಕ್ಷದ ಘಟಕದ ಮುಖ್ಯಸ್ಥ ಕಮಲ್‌ನಾಥ್ ಅವರನ್ನು ಹತ್ಯೆಗೈಯುವುದಾಗಿ ಪತ್ರದಲ್ಲಿ ಬೆದರಿಕೆ ಒಡ್ಡಲಾಗಿತ್ತು.

Similar News