ಮಂಗಳೂರಿನಲ್ಲಿ ಆಟೊರಿಕ್ಷಾ ನಿಗೂಢ ಸ್ಫೋಟ ಪ್ರಕರಣ | ರಾಜ್ಯದ ಗುಪ್ತಚರ ವಿಭಾಗ, ಗೃಹ ಇಲಾಖೆಯ ವೈಫಲ್ಯ: ಸಿದ್ದರಾಮಯ್ಯ

ತನಿಖೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯ

Update: 2022-11-20 07:21 GMT

ಬೆಂಗಳೂರು: ‘ಮಂಗಳೂರಿನಲ್ಲಿ ಸಂಭವಿಸಿರುವ ಸ್ಫೋಟ ಪ್ರಕರಣ ಮತ್ತೊಮ್ಮೆ ರಾಜ್ಯದ ಗುಪ್ತಚರ ವಿಭಾಗ ಮತ್ತು ಗೃಹ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. 

ಮಂಗಳೂರಿನಲ್ಲಿ ನಡೆದ ಆಟೊರಿಕ್ಷಾ ಲಘು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಟ್ವೀಟ್ ಮಾಡಿರುವ ಅವರು, ‘ರಾಜ್ಯ ಪೊಲೀಸ್ ಮಹಾನಿರ್ದೇಶಕರೇ ಭಯೋತ್ಪಾದಕ ಕೃತ್ಯ ಎಂದು ದೃಢೀಕರಿಸಿರುವ ಮಂಗಳೂರು ನಗರದ ಸ್ಫೋಟದ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಕಳವಳಕಾರಿಯಾದ ಈ ಘಟನೆಯ ಬಗ್ಗೆ ಪೊಲೀಸರು ತ್ವರಿತಗತಿಯಲ್ಲಿ ತನಿಖೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಘಟನೆಯ ಬಗ್ಗೆ ಊಹಾಪೋಹಗಳ ಸುದ್ದಿಗಳನ್ನು ನಂಬಿ ಉದ್ರಿಕ್ತರಾಗದೆ ಸಾರ್ವಜನಿಕರು ಸಂಯಮ ಮತ್ತು ಎಚ್ಚರದಿಂದ ಇರಬೇಕೆಂದು ಕೇಳಿಕೊಳ್ಳುತ್ತಿದ್ದೇನೆ ಎಂದು ಸಿದ್ದರಾಮಯ್ಯ ವಿನಂತಿಸಿದ್ದಾರೆ.

Similar News