ಕುಂಡಂತಾಯ- ಎಸ್.ಕೆ.ಸಾಲ್ಯಾನ್‌ಗೆ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ

Update: 2022-11-20 11:44 GMT

ಉಡುಪಿ: ಯುವವಾಹಿನಿ ಉಡುಪಿ ಘಟಕ ಆಶ್ರಯದಲ್ಲಿ  ಚಿಟ್ಪಾಡಿ ಲಕ್ಷ್ಮೀಸಭಾಭವನದಲ್ಲಿ ರವಿವಾರ ನಡೆದ ಸಮಾರಂಭದಲ್ಲಿ ‘ಜಾನಪದ ವಿದ್ವಾಂಸ ಹಾಗೂ ಸಂಶೋಧಕ ಕೆ.ಎಲ್.ಕುಂಡಂತಾಯ ಅವರಿಗೆ ಬನ್ನಂಜೆ ಬಾಬು ಅಮೀನ್ ಜಾನಪದ ವಿದ್ವಾಂಸ ಪ್ರಶಸ್ತಿ ಹಾಗೂ ಪ್ರಗತಿಪರ ಕೃಷಿಕ ಎಸ್.ಕೆ. ಸಾಲ್ಯಾನ್ ಬೆಳ್ಮಣ್ ಅವರಿಗೆ ಜಾನಪದ ಕಲಾವಿದ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಪ್ರಶಸ್ತಿ ಸ್ವೀಕರಿಸಿದ ಕೆ.ಎಲ್.ಕುಂಡಂತಾಯ ಮಾತನಾಡಿ, ತುಳುನಾಡು ಭಾವನಾತ್ಮಕ ಕುಟುಂಬ ಪದ್ದತಿಯನ್ನು ಹೊಂದಿರುವ ತುಳುನಾಡಿನಲ್ಲಿನ ವಿಚಾರ ಗಳು ಇಲ್ಲಿನ ಸಂಸ್ಕೃತಿ ಉಳಿವಿನಲ್ಲಿ ಪ್ರಮುಖ ಪಾತ್ರ ವಹಿಸಿದೆ. ಕ್ಷೇತ್ರ ಅಧ್ಯಯನ ಮುಕ್ತ ಮನಸ್ಸಿನಿಂದ ಕೂಡಿದ್ದರೆ ಮಾತ್ರ ಅದು ನಿಜವಾದ ಸಂಶೋಧನೆಯಾಗಿ ಸಮಾಜಕ್ಕೆ ಉಪಯುಕ್ತ ಮಾಹಿತಿ ದೊರೆಯುವಂತಾಗಲು ಸಾಧ್ಯ. ಸಂಶೋಧನಾ ವಿದ್ಯಾರ್ಥಿಗಳು ಕ್ಷೇತ್ರ ಅಧ್ಯಯನ ಕಡೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು.

ಬಂಟ್ವಾಳ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ತುಕರಾಂ ಪೂಜಾರಿ ಪ್ರಶಸ್ತಿ ಪ್ರದಾನ ಮಾಡಿ ದರು. ಅಧ್ಯಕ್ಷತೆಯನ್ನು ಯುವ ವಾವಹಿನಿ ಉಡುಪಿ ಘಟಕ ಅಧ್ಯಕ್ಷ ಮಹಾಬಲ ಅಮೀನ್ ವಹಿಸಿದ್ದರು. ತೆಂಕನಿಡಿ ಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಡಾ.ದುಗ್ಗಪ್ಪ ಕಜೆಕಾರ್ ಅಭಿನಂದನಾ ಭಾಷಣ ಮಾಡಿದರು.

ಮಂಗಳೂರು ಯುವ ವಾಹಿನಿ ಕೇಂದ್ರ ಸಮಿತಿ ಎರಡನೇ ಉಪಾಧ್ಯಕ್ಷ ಹರೀಶ್ ಕೆ.ಪೂಜಾರಿ, ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಉಪಸ್ಥಿತರಿದ್ದರು. ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ, ಭಜನಾ ಕಲಾವಿದ ಸುರೇಶ್ ಆಚಾರ್ಯ ಅವರನ್ನು ಗೌರವಿಸಲಾಯಿತು.

ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ಮುದ್ದು ಮೂಡುಬೆಳ್ಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಜಿ ಅಧ್ಯಕ್ಷ ಜಗದೀಶ್ ಕುಮಾರ್, ನಾರಾಯಣ ಬಿ. ಎಸ್. ಪ್ರಶಸ್ತಿ ಪುರಸ್ಕೃತರನ್ನು ಪರಿಚಯಿಸಿದರು. ಸಂಚಾಲಕ ಭಾಸ್ಕರ ಸುವರ್ಣ ಸ್ವಾಗತಿಸಿದರು. ಕಾರ್ಯದರ್ಶಿ ವಿನೋದ್ ಮಂಚಿ ವಂದಿಸಿದರು. ದಯಾನಂದ ಕರ್ಕೇರ ಕಾರ್ಯಕ್ರಮ ನಿರೂಪಿಸಿದರು.  

Similar News