×
Ad

ಆಯುರ್ವೇದ ವೈದ್ಯರು ಚಲಾವಣೆಯ ನಾಣ್ಯವಾಗಬೇಕು: ಮೋಹನ್ ಆಳ್ವ

Update: 2022-11-20 17:46 IST

ಉಡುಪಿ, ನ.20: ಕಾಲಕ್ಕೆ ಸರಿಯಾಗಿ ಆಯುರ್ವೇದ ವೈದ್ಯರು ಚಲಾ ವಣೆಯ ನಾಣ್ಯವಾಗಿರಬೇಕು ಎಂದು ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಹೇಳಿದ್ದಾರೆ.

ಉಡುಪಿಯ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿ ನಲ್ಲಿ ನೂತನವಾಗಿ ರೂಪುಗೊಂಡಿರುವ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ  ಕಾಲೇಜಿನ ಭಾವಪ್ರಕಾಶ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಜ್ಯೋತಿ ಕಾರ್ಯ ಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಗುರುವಂದನಾ ಕಾರ್ಯಕ್ರಮದಲ್ಲಿ ಹಿರಿಯ ಹಳೆ ವಿದ್ಯಾರ್ಥಿಗಳು ನಿವೃತ್ತ ಪ್ರಾಂಶುಪಾಲ ಡಾ.ಯು.ಎನ್.ಪ್ರಸಾದ್ ಹಾಗೂ ಶಾಲಾಕ್ಯತಂತ್ರ ವಿಭಾಗದ ನಿವೃತ್ತ ಹಿರಿಯ ಪ್ರಾಧ್ಯಾಪಕ ಡಾ.ಮರಿದೇವ ಶರ್ಮ ಅವರನ್ನು ಅಭಿನಂದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಹಾಸನ ಎಸ್‌ಡಿಎಂ ಆಯುರ್ವೇದ ಕಾಲೇಜಿನ ರೋಗ ನಿಧಾನ ವಿಭಾಗದ ಮುಖ್ಯಸ್ಥ ಡಾ.ಗೋಪಿಕೃಷ್ಣ ಬರೆದಿರುವ ನಿಧಾನ ಪ್ರಕಾಶ್ ಪುಸ್ತಕವನ್ನು ಬಿಡುಗಡೆಗೊಳಿಸಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಮಮತಾ ಕೆ.ವಿ. ವಹಿಸಿದ್ದರು. ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ನಾಗರಾಜ್ ಎಸ್., ಸ್ನಾತಕೋತ್ತರ ಹಾಗೂ ಪಿಎಚ್‌ಡಿ ಅಧ್ಯಯನ ಕೇಂದ್ರದ ಡಾ.ನಿರಂಜನ್ ರಾವ್ ಉಪಸ್ಥಿತರಿದ್ದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ.ಭರತೇಶ್ ಎ. ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಡಾ.ಮುಹಮ್ಮದ್ ಇಕ್ಬಾಲ್ ಸ್ವಾಗತಿಸಿದರು. ಉಪಾಧ್ಯಕ್ಷ ಡಾ.ನಾರಾಯಣ ಟಿ.ಅಂಚನ್ ವಂದಿಸಿದರು. ಸಹಪ್ರಾಧ್ಯಾಪಕ ಡಾ.ರಾಕೇಶ್ ಆರ್.ಎನ್. ಮತ್ತು ಸಹಾಯಕ ಪ್ರಾಧ್ಯಾಪಕ ಡಾ.ಕಾವ್ಯ ಕಾರ್ಯಕ್ರಮ ನಿರೂಪಿಸಿದರು.

Similar News