×
Ad

ನ.25ರಂದು ಉಡುಪಿ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆ

Update: 2022-11-20 17:56 IST

ಉಡುಪಿ, ನ.20: ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ನೆಹರೂ ಜಯಂತಿ ಹಾಗೂ ಮಕ್ಕಳ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ರಸಪ್ರಶ್ನೆ ಸ್ಪರ್ಧೆ ಯನ್ನು ನ.25ರಂದು ಉದ್ಯಾವರ ಹಿಂದೂ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ತರ ಸುವರ್ಣ ಸಂಭ್ರಮ ಸಭಾಭವನದಲ್ಲಿ ಏರ್ಪಡಿಸಲಾಗಿದೆ.

ಬೆಳಿಗ್ಗೆ 9.15ಕ್ಕೆ ಸ್ಪರ್ಧೆಯನ್ನು ಝೀಟಿವಿ ಡ್ರಾಮ ಜೂನಿಯರ್ ಸೀಸನ್- 4 ವಿಜೇತೆ ಸಮೃದ್ಧಿ ಕುಂದಾಪುರ ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ವಹಿಸಲಿರುವರು. ಅಪರಾಹ್ನ 3.30ಕ್ಕೆ ಜರಗುವ ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ಅಬ್ದುಲ್ ಜಲೀಲ್ ಸಾಹೇಬ್ ವಹಿಸಲಿರುವರು ಎಂದು ಸಂಸ್ಥೆಯ ಅಧ್ಯಕ್ಷ  ರಿಯಾಝ್ ಪಳ್ಳಿ ಮತ್ತು ಪ್ರಧಾನ ಕಾರ್ಯದರ್ಶಿ ತಿಲಕ್‌ರಾಜ್ ಸಾಲ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Similar News