×
Ad

ಉಡುಪಿ: ನ.22ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

Update: 2022-11-20 19:33 IST

ಉಡುಪಿ, ನ.20: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ನ.22ರಂದು ಕೆಲವು ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

ನ.22ರಂದು ಕೇಮಾರ್ ವಿದ್ಯುತ್ ಉಪಕೇಂದ್ರ ಹಾಗೂ ಬೆಳ್ಮಣ್ ಉಪಕೇಂದ್ರದಿಂದ ಹೊರಡುವ ಫೀಡರ್‌ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಿಟ್ಟೆ, ನಿಟ್ಟೆ ಕಾಲೇಜು, ನಿಟ್ಟೆ ವಾಟರ್ ಸಪ್ಲೈ, ಬೊರ್ಗಲ್‌ಗುಡ್ಡೆ, ಲೆಮಿನಾ ಇಂಡಸ್ಟ್ರಿಸ್, ದೂಪದಕಟ್ಟೆ, ಕೆಮ್ಮಣ್ಣು, ನೆಲ್ಲಿಗುಡ್ಡೆ, ಕಲ್ಯಾ, ಬೆಳ್ಮಣ್, ನಂದಳಿಕೆ, ಜಂತ್ರ, ಕೆದಿಂಜೆ, ಮಾವಿನಕಟ್ಟೆ, ದೇಂದೊಟ್ಟು ಪದವುಕೊರಜೆ, ಮುಂಡ್ಕೂರು, ಕಾಂಜರಕಟ್ಟೆ, ಸಚ್ಚರಿಪೇಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಕುಂದಾಪುರ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕೆ.ವಿ.ಅಂಪಾರು, ಬಳ್ಕೂರು ಮತ್ತು ಜಪ್ತಿ ವಾಟರ್ ಸಪ್ಲೈ ಮಾರ್ಗಗಳಲ್ಲಿ ಟ್ರೀ ಟ್ರಿಮ್ಮಿಂಗ್ ಮತ್ತು ಮಾರ್ಗ ನಿರ್ವಹಣಾಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅಂಪಾರು, ಹಳ್ನಾಡು, ಕಾವ್ರಾಡಿ, ಶಂಕರನಾರಾಯಣ, ಕೋಣಿ, ಬಳ್ಕೂರು, ಕಂಡ್ಲೂರು, ಮೂಡ್ಲಕಟ್ಟೆ, ಕುಂದಾಪುರ ಪುರಸಭೆಯ ಕುಡಿಯುವ ನೀರಿನ ಸ್ಥಾವರ, ಬಸ್ರೂರು, ಆನಗಳ್ಳಿ ಮತ್ತು ಕಂದಾವರ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ವರಾಹಿ ವಿದ್ಯುದಾಗಾರದಲ್ಲಿ ಬ್ಲ್ಯಾಕ್ ಸ್ಟಾರ್ಟ್ ಪೋಸೀಜರ್ ಕಾಮಗಾರಿ ಯನ್ನು ಹಮ್ಮಿಕೊಂಡಿರುವುದರಿಂದ ಮಣಿಪಾಲ, ನಿಟ್ಟೂರು, ಬ್ರಹ್ಮಾವರ,  ಕುಂಜಿಬೆಟ್ಟು, ಮಲ್ಪೆ, ಶಿರ್ವ ಫೀಡರಿನಲ್ಲಿ ಉಡುಪಿ ತಾಲೂಕು, ಮಣಿಪಾಲ ಉಪ ವಿಭಾಗ ಏರಿಯಾ, ಬ್ರಹ್ಮಾವರ ತಾಲೂಕು, ಕಾಪು ತಾಲೂಕು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ಅನಿಯಮಿತ ವಿದ್ಯುತ್ ವ್ಯತ್ಯಯವಾಗಲಿದೆ.

ಮಣಿಪಾಲ ವಿದ್ಯುತ್‌ಉಪಕೇಂದ್ರದಿಂದ ಹೊರಡುವ ಮೂಡುಬೆಳ್ಳೆ ಮತ್ತು ಉದ್ಯಾವರ-2 ಫೀಡರಿನಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದ ರಿಂದ ಮಣಿಪುರ, ಮೂಡುಬೆಳ್ಳೆ, ಮರ್ಣೆ, ಕಟ್ಟಿಂಗೇರಿ, ಕೆಮ್ತೂರು, ಕೊರಂಗ್ರ ಪಾಡಿ, ಮಾರ್ಪಳ್ಳಿ, ಕುಕ್ಕಿಕಟ್ಟೆ, ಉದ್ಯಾವರ-2, ಕಟಪಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ ಮಟಪಾಡಿ, ಹೇರೂರು, ಕೊಳಲಗಿರಿ, ಚೇರ್ಕಾಡಿ ಹಾಗೂ ನಿಟ್ಟೂರು ಉಪವಿದ್ಯುತ್ ಕೇಂದ್ರ ದಿಂದ ಹೊರಡುವ ಕಲ್ಯಾಣಪುರ ಫೀಡರಿನಲ್ಲಿ ಹಾಗೂ ವಿದ್ಯುತ್ ಸ್ವೀಕರಣಾ ಕೇಂದ್ರ ಹೆಗ್ಗುಂಜೆ ಉಪಕೇಂದ್ರದಿಂದ ಹೊರಡುವ ಹೆಗ್ಗುಂಜೆ ಮತ್ತು ನಂಚಾರು ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಟಪಾಡಿ, ಉಪ್ಪೂರು, ಮಾಯಾಡಿ, ಸಾಲ್ಮರ, ಕುದ್ರುಬೆಟ್ಟು, ಕೆ.ಜಿರೋಡ್, ಕೋಟೆರೋಡ್, ನಿಡಂಬಳ್ಳಿ, ಕಲ್ಯಾಣಪುರ, ಉಗ್ಗೇಲ್‌ಬೆಟ್ಟು, ಜಾತಬೆಟ್ಟು, ಹಾವಂಜೆ, ಆದಶ್ನಗರ, ಕೀರ್ತಿನಗರ, ಸಾಲಿಕೇರಿ, ಬಿರ್ತಿ, ಹೊನ್ನಾಳ, ಕುಕ್ಕುಡೆ, ಹೇರೂರು, ಚಾಂತಾರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಪಡುನೀಲಾವರ, ಎಳ್ಳಂಪಳ್ಳಿ, ತಡೆಕಲ್ಲು, ಪ್ರಗತಿನಗರ, ಜಾರ್ಜೆಡ್ಡು, ಗಣೇಶ್ ಕಲಾಮಂದಿರ, ಕೆ.ಕೆ.ಪಾರ್ಮ್ಸ್, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ, ಬಡಾನಿಡಿಯೂರು, ಹೆಗ್ಗುಂಜೆ, ಕಾಡೂರು, ಪೆಜಮಂಗೂರು, ಕೊಕ್ಕರ್ಣೆ, ಕೆಂಜೂರು, ಶಿರೂರು, ಹಿಲಿಯಾಣ, ನಂಚಾರು, ಮುದ್ದೂರು, ಕಜ್ಕೆ ಮತುತಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಮಣಿಪಾಲ-ಶಿರ್ವ ಲೈನ್‌ನಲ್ಲಿ ಮತುತಿ ಶಿರ್ವ ಎಂಯುಎಸ್‌ಎಸ್‌ನಲ್ಲಿ ವಾಹಕ ಬದಲಾವಣೆ ಕಾಮಗಾರಿ ಮತ್ತು ಬ್ಯಾಂಕ್-1 ಗೆ ಸಂಬಂಧಿಸಿದ ಕಂಟ್ರೋಲ್ ಕೇಬಲ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಉಪಕೇಂದ್ರ ದಿಂದ ಹೊರಡುವ ಎಲ್ಲಾ ಫೀಡರ್ ಮಾರ್ಗದಲ್ಲಿ ಉಳಿಯಾರಗೋಳಿ ಬಂಟಕಲ್ಲು, ಪೊಲಿಪು, ಮೂಡಬೆಟ್ಟು, ಪಾಂಗಳ, ಶಿರ್ವ ಹಾಗೂ ಶಂಕರಪುರ, ಕುರ್ಕಾಲು, ಇನ್ನಂಜೆ, ಕಳತ್ತೂರು(ಪುಂಚಲಕಾಡು), ಪಣಿಯೂರು, ಬಡಾ (ಉಚ್ಚಿಲ), ಮೂಳೂರು, ಬೆಳಪು, ಮಲ್ಲಾರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5.30ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

Similar News