ಸಹೋದರಿಯ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು 2 ವಾರ ಜಾಮೀನು ಕೋರಿದ ಉಮರ್ ಖಾಲಿದ್
ಹೊಸದಿಲ್ಲಿ, ನ. 21: ದಿಲ್ಲಿ ಗಲಭೆ ಪ್ರಕರಣದ ಆರೋಪಿಯಾಗಿರುವ ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ Umar Khalid ತನ್ನ ಸಹೋದರಿಯ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ಎರಡು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡುವಂತೆ ಕೋರಿ ದಿಲ್ಲಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.
ಮೇಲ್ನೋಟಕ್ಕೆ ಆರೋಪ ಸತ್ಯವಂದು ಕಾಣುತ್ತದೆ. ಆದುದರಿಂದ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ ಜಾಮೀನು ನೀಡಲು ಅವಕಾಶ ನೀಡುವುದಿಲ್ಲ ಎಂದು ದಿಲ್ಲಿ ಉಚ್ಚ ನ್ಯಾಯಾಲಯ ಅಕ್ಟೋಬರ್ 18ರಂದು ತಿಳಿಸಿತ್ತು. ದಿಲ್ಲಿಯಲ್ಲಿ ಗಲಭೆಗೆ ಉತ್ತೇಜನ ನೀಡಿದ ಆರೋಪದಲ್ಲಿ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾನಿಲಯದ ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಹಾಗೂ ಸಾರ್ವಜನಿಕ ಸೊತ್ತಿಗೆ ಹಾನಿ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಹೊಸ ಅರ್ಜಿಯನ್ನು ನವೆಂಬರ್ 25ರಂದು ವಿಚಾರಣೆ ನಡೆಸಲು ಹೆಚ್ಚುವರಿ ಸತ್ರ ನ್ಯಾಯಾಲಯದ ನ್ಯಾಯಾಧೀಶ ಅಮಿತಾಭ್ ರಾವತ್ ಅವರು ನವೆಂಬರ್ 18ರಂದು ಪಟ್ಟಿ ಮಾಡಿದ್ದಾರೆ.