×
Ad

ನ. 26ರಿಂದ ಗುಜರಾತ್‌ ನಲ್ಲಿ ಮಲ್ಲಿಕಾರ್ಜುನ ಖರ್ಗೆ ಚುನಾವಣಾ ಪ್ರಚಾರ

Update: 2022-11-21 20:46 IST

ಗಾಂಧಿನಗರ, ನ. 21: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನವೆಂಬರ್ 26ರಿಂದ 28ರ ವರೆಗೆ ಗುಜರಾತ್ ನಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಖರ್ಗೆ ಅವರು ನವೆಂಬರ್ 26ರಂದು ಅಹ್ಮದಾಬಾದ್ ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಮರು ದಿನ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. 

ನವೆಂಬರ್ 27ರಂದು ರಾಹುಲ್ ಗಾಂಧಿ ಅವರೊಂದಿಗೆ ‘ಭಾರತ್ ಜೋಡೊ ಯಾತ್ರೆ’ಯಲ್ಲಿ ಪಾಲ್ಗೊಂಡ ಬಳಿಕ ಅವರು ಇಂದೋರ್ ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಭಾರತ್ ಜೋಡೊ ಯಾತ್ರೆ ನವೆಂಬರ್ 23ರಂದು ಮಧ್ಯಪ್ರದೇಶ ಪ್ರವೇಶಿಸಲಿದೆ. ನವೆಂಬರ್ 28ರಂದು ಗಾಂಧಿನಗರದ ಸಮೀಪದ ಖರ್ಗೆ ಅವರು ಇನ್ನೊಂದು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಗುಜರಾತ್ ವಿಧಾನ ಸಭೆ ಚುನಾವಣೆ ಎರಡು ಹಂತಗಳಲ್ಲಿ ಡಿಸೆಂಬರ್ 1 ಹಾಗೂ 5ರಂದು ನಡೆಯಲಿದೆ. ಡಿಸೆಂಬರ್ 8ರಂದು ಫಲಿತಾಂಶ ಘೋಷಣೆಯಾಗಲಿದೆ.

Similar News