ಶಾಲೆಗಳಲ್ಲಿ ನ.26ರಂದು ಸಂವಿಧಾನ ದಿನಾಚರಣೆ: ಶಿಕ್ಷಣ ಇಲಾಖೆ ಆದೇಶ

Update: 2022-11-21 18:06 GMT

ಬೆಂಗಳೂರು, ನ. 21: ಸಂವಿಧಾನವು ಅಂಗೀಕರಿಸಲ್ಪಟ್ಟ ದಿನವಾದ ನ.26 ಅನ್ನು ಸಂವಿಧಾನ ದಿನಾಚಾರಣೆಯನ್ನಾಗಿ ಆಚಾರಣೆ ಮಾಡಲಾಗುತ್ತಿದ್ದು, ರಾಜ್ಯದ ಎಲ್ಲ ಶಾಲೆಗಳಲ್ಲಿ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮ ಸೇರಿ ಇತರೆ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಸುತ್ತೋಲೆಯನ್ನು ಹೊರಡಿಸಿದೆ. 

ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳು ಮತ್ತು ತತ್ವಗಳ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ನ.26ರ ಬೆಳಿಗ್ಗೆ ಏಕಕಾಲದಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನು ಆಯೋಜಿಸಬೇಕು. ಶಾಲಾ ಆವರಣದಲ್ಲಿನ ಪ್ರಮುಖ ಸ್ಥಳಗಳಲ್ಲಿ ಭಾರತ ಸಂವಿಧಾನದ ಪೀಠಿಕೆ ಮತ್ತು ಮೂಲಭೂತ ಕರ್ತವ್ಯಗಳ ಪ್ರದರ್ಶನ ಮಾಡಬೇಕು. ಶಾಲೆಗಳಲ್ಲಿ ಸಂವಿಧಾನದ ವಿವಿಧ ಅಂಶಗಳ ಕುರಿತು ಚರ್ಚಾ ಸ್ವರ್ಧೆ, ರಸಪ್ರಶ್ನೆ, ಪ್ರಬಂಧ ಸ್ವರ್ಧೆ ಇತ್ಯಾದಿ ಕಾರ್ಯಕ್ರಮಗಳನ್ನು ನ.26ರೊಳಗೆ ಹಮ್ಮಿಕೊಳ್ಳಬೇಕು ಎಂದು ತಿಳಿಸಿದೆ.

Similar News