ಕಟಪಾಡಿ ಆಟೋ ರಿಕ್ಷಾ ನಿಲ್ದಾಣ ವಿವಾದ: ಶಾಸಕರಿಂದ ಸಭೆ

Update: 2022-11-21 18:10 GMT

ಕಾಪು: ಕಟಪಾಡಿ ಗ್ರಾಪಂ ವ್ಯಾಪ್ತಿಯ ಕಟಪಾಡಿ ಪೇಟೆಯಲ್ಲಿರುವ ರಿಕ್ಷಾ ನಿಲ್ದಾಣ ತೆರವಿಗೆ ಲೋಕಾಯುಕ್ತದಿಂದ ನೋಟೀಸ್ ಜಾರಿಯಾದ ಹಿನ್ನಲೆ ಯಲ್ಲಿ ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ರಿಕ್ಷಾ ಮಾಲಕ -ಚಾಲಕರ ಸಂಘ ಹಾಗೂ ಅಧಿಕಾರಿಗಳೊಂದಿಗೆ ಸೋಮವಾರ ಗ್ರಾಪಂ ಸಭಾಂಗಣದಲ್ಲಿ ಸಮಾಲೋಚನಾ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಲೋಕೋಪಯೋಗಿ ಇಲಾಖೆ ಆದೇಶವನ್ನು ಪುನರ್ ಪರಿಶೀಲಿಸಿ ಕಟಪಾಡಿ ಅಂಡರ್‌ಪಾಸ್ ಆಗುವವರೆಗೆ ಈಗ ಇರುವ ಸ್ಥಳದಲ್ಲಿ ರಿಕ್ಷಾ ನಿಲ್ದಾಣ ಇರಬೇಕು. ವಸ್ತುಸ್ಥಿತಿಯನ್ನು, ರಿಕ್ಷಾ ಚಾಲಕರಿಗೆ ತೊಂದರೆಯಾಗದಂತೆ ವರದಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಜಗದೀಶ್ ಭಟ್, ಸಹಾಯಕ ಇಂಜಿನಿಯರ್ ಸವಿತ, ಕಾಪು ಪೊಲೀಸ್ ವೃತ್ತ ನಿರೀಕ್ಷಕ ಪೂವಯ್ಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯೋಗಿತಾ, ಆಟೋ ಚಾಲಕ ಮಾಲಕ ಸಂಘದ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು, ವರ್ತಕರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಆಟೋ ಚಾಲಕರು, ಸಾರ್ವಜನಿಕರು ಉಪಸ್ಥಿತರಿದ್ದರು.

Similar News