ಕರ್ನಾಟಕ– ಮಹಾರಾಷ್ಟ್ರ ಗಡಿ ವಿವಾದ : ನಾಳೆ (ನ.23) ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

Update: 2022-11-22 06:18 GMT

ಬೆಂಗಳೂರು,ನ.22: ಕರ್ನಾಟಕ ಗಡಿ ವಿವಾದ ಕುರಿತಂತೆ ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿದ ಅರ್ಜಿಯು ನ.23ಕ್ಕೆ ವಿಚಾರಣೆಗೆ ಬರಲಿದೆ. 

ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಈಗಾಗಲೇ ಸರ್ವಪಕ್ಷಗಳ ನಿಯೋಗ ಕರೆದು ಉನ್ನತ ಮಟ್ಟದ ಸಭೆ ಮಾಡಿದ್ದಾರೆ. ಈ ಸಭೆಯ ಬೆನ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡ ಸೋಮವಾರ ರಾತ್ರಿ ಸಭೆ ನಡೆಸಿ ಮುಂದಿನ ನಡೆಯ ಬಗ್ಗೆ ತಜ್ಞರೊಂದಿಗೆ ಚರ್ಚೆ ನಡೆಸಿದ್ದಾರೆ.

ಬಲಿಷ್ಠ ಹಿರಿಯ ವಕೀಲರ ತಂಡ ರಚನೆ: ಸಿಎಂ ಬೊಮ್ಮಾಯಿ 

''ಗಡಿವಿವಾದಗಳನ್ನು ಬಗೆಹರಿಸಲು  ಅತ್ಯಂತ ಬಲಿಷ್ಠವಾಗಿರುವ ಹಿರಿಯ ವಕೀಲರ ತಂಡವನ್ನು ರಚನೆ ಮಾಡಲಾಗಿದೆ. ತಂಡವು  ಹಿರಿಯ ವಕೀಲರಾದ ಮುಕುಲ್ ರೋಹಟಗಿ, ಶ್ಯಾಮ್ ದಿವಾನ್ ಹಾಗೂ ಕರ್ನಾಟಕದ  ಹಿರಿಯ ವಕೀಲರಾದ ಉದಯ್ ಹೊಳ್ಳ , ಬೆಳಗಾವಿಯ ಮಾರುತಿ ಜಿರ್ಲೆ, ವಕೀಲರಾದ ರಘುಪತಿ ಅವರನ್ನೊಳಗೊಂಡಿದೆ'' ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

Similar News