ಮಂಗಳೂರಿನಲ್ಲಿ ಎನ್ಐಎ ಘಟಕ ತೆರೆಯುವಂತೆ ಕೇಂದ್ರ ಸರಕಾರಕ್ಕೆ ಪ್ರಸ್ತಾವ: ತೇಜಸ್ವಿ ಸೂರ್ಯ

Update: 2022-11-22 06:46 GMT

ಉಡುಪಿ: ಕರಾವಳಿಯ ಭಾಗದಲ್ಲಿ ಭಯೋತ್ಪದನಾ ಚಟುವಟಿಕೆ ತಡೆಗಾಗಿ ಮಂಗಳೂರಿನಲ್ಲಿ ಎನ್ಐಎ ಘಟಕ ತೆರೆಯುವಂತೆ ಕೇಂದ್ರ ಸರಕಾರಕ್ಕೆ ಪ್ರಸ್ತಾವ ಮಾಡಲಾಗುವುದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಎನ್ಐಎ ಪ್ರಾದೇಶಿಕ ಘಟಕ ತೆರೆಯುವಂತೆ ಈ ಹಿಂದೆ ಈ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೆ. ಕರಾವಳಿಯಲ್ಲಿ ಉಗ್ರ ಕೃತ್ಯಗಳು ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲಿ ಪ್ರಾದೇಶಿಕ ಘಟಕ ಆರಂಭಿಸುವಂತೆ ಕೋರುತ್ತೇನೆ. ಕೇಂದ್ರ ಗೃಹಸಚಿವ ಅಮಿತ್ ಶಾ ಮತ್ತು ಸಿಎಂ ಬೊಮ್ಮಾಯಿ ಜೊತೆ ಮಾತುಕತೆ ನಡೆಸಲಾಗುವುದು. ಪೊಲೀಸ್- ಎನ್ಐಎ ಜೊತೆಯಾಗಿ ಕೆಲಸ ಮಾಡಿದರೆ ಇಂತಹ ಘಟನೆ ತಡೆಗಟ್ಟಬಹುದು ಎಂದರು.

Similar News