×
Ad

ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿಲ್ಲ: ಎಡಿಜಿಪಿ ಸ್ಪಷ್ಟನೆ

ಆಟೋ ರಿಕ್ಷಾದಲ್ಲಿ ಸ್ಫೋಟ ಪ್ರಕರಣ

Update: 2022-11-22 15:35 IST

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರ ಪಂಪ್ವೆಲ್ ಸಮೀಪದ ನಾಗುರಿ ಎಂಬಲ್ಲಿ ಶನಿವಾರ ಸಂಜೆ ಆಟೊ ರಿಕ್ಷಾದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. 

ಈ ಸಂಬಂಧ ಟ್ವಟರ್ ನಲ್ಲಿ ವಿಡಿಯೋ ಹಂಚಿಕೊಡಿರುವ ಅವರು, ''ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿ ಮಂಗಳೂರು ಸ್ಫೋಟದ ಘಟನೆಯಲ್ಲಿ ಭಾಗಿಯಾಗಿಲ್ಲ ಎಂಬುದು ನಮ್ಮ ತನಿಖೆಯಿಂದ ತಿಳಿದುಬಂದಿದೆ. ಆದ್ದರಿಂದ ದಯವಿಟ್ಟು ವದಂತಿಗಳಿಗೆ ಕಿವಿಕೊಡಬೇಡಿ, ಶಾಂತಿ ಕಾಪಾಡಲು ಒಟ್ಟಾಗಿ ಕೆಲಸ ಮಾಡೋಣ'' ಎಂದು ಮನವಿ ಮಾಡಿಕೊಂಡಿದ್ದಾರೆ. 

Similar News