ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ

Update: 2022-11-22 13:34 GMT

ಕುಂದಾಪುರ, ನ.22: ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ 2022ನೆ ಸಾಲಿನ ವಾರ್ಷಿಕ ಕ್ರೀಡಾಕೂಟವು ನ.21ರಂದು ನಡೆಯಿತು.

ಕ್ರೀಡೋತ್ಸವವನ್ನು ಉದ್ಘಾಟಿಸಿದ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಧರ್ಮದರ್ಶಿ ಕೆರಾಡಿ ಚಂದ್ರಶೇಖರ ಶೆಟ್ಟಿ ಮಾತನಾಡಿ, ಗೆದ್ದವರು ಹಿಗ್ಗದೇ, ಸೋತವರು ಕುಗ್ಗದೆ ಸಮಾನ ಮನಸ್ಕರಾಗಿ ಸೋಲು-ಗೆಲುವನ್ನು ಸ್ವೀಕರಿಸಬೇಕು. ದೇಶ ನನಗಾಗಿ ಏನು ಕೊಟ್ಟಿದೆ ಎಂದು ಪ್ರಶ್ನಿಸದೇ, ದೇಶಕ್ಕಾಗಿ ನಾನೇನು ಕೊಡಬಹುದು ಎಂದು ಪ್ರತಿಯೊಬ್ಬ ಕ್ರೀಡಾಪಟು ಯೋಚಿಸಬೇಕು ಎಂದು  ಹೇಳಿದರು.

ಕ್ರೀಡಾಜ್ಯೋತಿಯನ್ನು ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಬೆಳಗಿಸಿದರು. ಬ್ಯಾರೀಸ್ ವಿಶ್ವಸ್ಥ ಮಂಡಳಿ ಸದಸ್ಯ ಸಿದ್ದೀಕ್ ಬ್ಯಾರಿ ಕ್ರೀಡಾಕೂಟದ ಧ್ವಜಾ ರೋಹಣ ನೆರವೇರಿಸಿದರು. ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಎಂ.ಅಬ್ದುಲ್ ರಹ್ಮಾನ್ ವಹಿಸಿದ್ದರು.‌

ವೇದಿಕೆಯಲ್ಲಿ ಕುಂದಾಪುರ ಪುರಸಭಾ ಸದಸ್ಯೆ ಕಮಲಾ, ಕೋಡಿ ಚಕ್ರೇಶ್ವರಿ ದೇವಸ್ಥಾನದ ಧರ್ಮದರ್ಶಿ ಗೋಪಾಲ ಪೂಜಾರಿ, ಪುರಸಭಾ ನಾಮನಿರ್ದೇಶಿತ ಸದಸ್ಯ ನಾಗರಾಜ್ ಕಾಂಚನ್, ಬ್ಯಾರೀಸ್ ಆಂಗ್ಲ ಮಾಧ್ಯಮ ಶಾಲೆಯ ಸಲಹಾ ಮಂಡಳಿ ಸದಸ್ಯ ಅಬು ಶೇಕ್ ಸಾಹೇಬ್ ಉಪಸ್ಥಿತರಿದ್ದರು.

ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಸಿದ್ದಪ್ಪ ಕೆ.ಎಸ್. ಸ್ವಾಗತಿಸಿದರು. ಕನ್ನಡ ಅನುದಾನಿತ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಇಲ್ಯಾಸ್ ವಂದಿಸಿದರು. ಕನ್ನಡ ಉಪನ್ಯಾಸಕ ಸಂದೀಪ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Similar News