×
Ad

ನೀಲಾವರ: ಸಾವಯವ ಕೃಷಿ ತರಬೇತಿ, ಪ್ರಾತ್ಯಕ್ಷಿಕೆ

Update: 2022-11-22 19:30 IST

ಉಡುಪಿ, ನ.22: ಉಡುಪಿ ಜಿಪಂ, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳು ಹಾಗೂ ಗೋವರ್ಧನಗಿರಿ ಟ್ರಸ್ಟ್ ಪೇಜಾವರ ಮಠ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಸಾವಯವ ಸಿರಿ ಯೋಜನೆಯಡಿ ಸಾವಯವ ಕೃಷಿ ವಿಧಾನಗಳ ತರಬೇತಿ ಹಾಗೂ ಪದ್ಧತಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನ.23 ರಂದು ಬೆಳಗ್ಗೆ 10 ಗಂಟೆಗೆ ಬ್ರಹ್ಮಾವರದ ನೀಲಾವರ ಗೋಶಾಲೆಯಲ್ಲಿ ನಡೆಯಲಿದೆ.

ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ನೀಲಾವರ ಗ್ರಾಪಂ ಅಧ್ಯಕ್ಷ ಮಹೇಂದ್ರಕುಮಾರ್, ರಾಜ್ಯ ಮಟ್ಟದ ಸಾವಯವ ಕೃಷಿ ಉನ್ನತ ಮಟ್ಟದ ಅಧಿಕಾರಯುಕ್ತ ಸಮಿತಿ ಸದಸ್ಯ ರಾಘವೇಂದ್ರ ರಾವ್ ಉಪ್ಪೂರು, ಕೃಷಿಕ ಸಮಾಜದ ಜಿಲ್ಲಾ ಅಧ್ಯಕ್ಷ ಅಶೋಕ್‌ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಪಂ ಸಿಇಓ ಪ್ರಸನ್ನ ಹೆಚ್, ಎಸ್ಪಿ ಪೊಲೀಸ್ ವರಿಷ್ಠಾಧಿ ಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ, ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು ಭಾಗವಹಿಸಲಿದ್ದಾರೆ. 

Similar News