ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನ
Update: 2022-11-22 19:33 IST
ಉಡುಪಿ : ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿರುವ ಪ್ರವರ್ಗ- ಬಿ(೧) ಮತ್ತು ಸಿ(೧) ಅಧಿಸೂಚಿತ ಸಂಸ್ಥೆಗಳಾದ ಉಡುಪಿ ತಾಲೂಕು ಕೊಡವೂರು ಶ್ರೀಶಂಕರನಾರಾಯಣ ದೇವಸ್ಥಾನದ ಸಾಮಾನ್ಯ ಒಂದು ಸ್ಥಾನಕ್ಕೆ ಮತ್ತು ಬೈಂದೂರು ತಾಲೂಕು ಹೇರೂರು ಚಿಕ್ತಾಡಿ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಪರಿಶಿಷ್ಟ ಜಾತಿಯ ಒಂದು ಸ್ಥಾನಕ್ಕೆ ಮೂರು ವರ್ಷಗಳ ಅವಧಿಗೆ ಆಸಕ್ತ ಭಕ್ತಾಧಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕನಿಷ್ಠ 25 ವಷರ್ ಮೇಲ್ಪಟ್ಟ ಆಸಕ್ತರು ಅರ್ಜಿ ಸಲ್ಲಿಸಲು ಡಿ.21 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಆಯುಕ್ತರ ಕಚೇರಿ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಇವರನ್ನು ಸಂಪರ್ಕಿಸ ಬಹುದು ಎಂದು ಪ್ರಕಟಣೆ ತಿಳಿಸಿದೆ.