ನ.23: ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳೂರಿಗೆ ಭೇಟಿ

Update: 2022-11-22 16:37 GMT

ಮಂಗಳೂರು, ನ.22: ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ನ.23ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.

ಬೆಳಗ್ಗೆ 10ಕ್ಕೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬಳಿಕ ನಾಗುರಿಯಲ್ಲಿ ನಡೆದ ಸ್ಫೋಟದಿಂದ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುವನ್ನು ಭೇಟಿ ಮಾಡಲಿದ್ದಾರೆ. ನಂತರ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.

ಮಧ್ಯಾಹ್ನ 1:30ಕ್ಕೆ ಮೂಡುಬಿದಿರೆ, ಕಾರ್ಕಳ, ಆಗುಂಬೆ ರಸ್ತೆ ಮೂಲಕ ಶಿವಮೊಗ್ಗಕ್ಕೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Similar News