ಯುವಕ ನಾಪತ್ತೆ

Update: 2022-11-22 16:40 GMT

ಉಳ್ಳಾಲ: ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶ್ಯಾಮ ಎಂಬವರು ನಾಪತ್ತೆ ಯಾದ ಘಟನೆ ನಡೆದಿದ್ದು, ಈ ಬಗ್ಗೆ ಅವರ ಪತ್ನಿ ಭವ್ಯ ನೀಡಿದ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.

ಪತ್ನಿ ಭವ್ಯ ಹಾಗೂ ಇಬ್ಬರು ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. ನವೆಂಬರ್ 9 ರಂದು ಶ್ಯಾಮ ರವರು ಎಂದಿನಂತೆ ಪೈಂಟಿಂಗ ಕೆಲಸಕ್ಕೆ ಮನೆಯಿಂದ ಹೋಗಿ ಬರುತ್ತೇನೆಂದು ಹೇಳಿ ಹೊರಟು ಹೋದವರು ವಾಪಸ್ ಮನೆಗೆ ಬಾರದೆ ನಾಪತ್ತೆ ಆಗಿದ್ದಾರೆ ಎಂದು ಭವ್ಯ ನೀಡಿದ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ 

Similar News