ಮಂಗಳೂರು | ಆಟೊ ರಿಕ್ಷಾದಲ್ಲಿ ಸ್ಫೋಟ ಪ್ರಕರಣ: ಸ್ಥಳಕ್ಕೆ ಗೃಹಸಚಿವರು ಭೇಟಿ, ಪರಿಶೀಲನೆ

Update: 2022-11-23 07:03 GMT

ಮಂಗಳೂರು, ನ.22: ರಾಷ್ಟ್ರೀಯ ಹೆದ್ದಾರಿ 75ರ ಪಂಪ್ ವೆಲ್ ಸಮೀಪದ ನಾಗುರಿ ಎಂಬಲ್ಲಿ ಕಳೆದ ಶನಿವಾರ ಸಂಜೆ ಆಟೊ ರಿಕ್ಷಾದಲ್ಲಿ ಸ್ಫೋಟ ಸಂಭವಿಸಿದ ಸ್ಥಳಕ್ಕೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಪೂರ್ವಾಹ್ನ 11 ಗಂಟೆ ಸುಮಾರಿಗೆ ಭೇಟಿ ನೀಡಿದರು.

ಈ ವೇಳೆ ಸ್ಫೋಟ ಸಂಭವಿಸಿದ ಆಟೋ ರಿಕ್ಷಾವನ್ನು ಪರಿಶೀಲಿಸಿ, ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಆಸ್ಪತ್ರೆಗೆ ತೆರಳಿ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರ ಆರೋಗ್ಯ ವಿಚಾರಿಸಿದರು.

ಈ ವೇಳೆ ಶಾಸಕ ಭರತ್ ಶೆಟ್ಟಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಐಜಿಪಿ ಪ್ರವೀಣ್ ಸೂದ್, ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಐಜಿಪಿ ಚಂದ್ರಗುಪ್ತ, ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಡಿಸಿಪಿ ಅಂಶು ಕುಮಾರ್ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಶನಿವಾರ ಸಂಜೆ ಸಂಭವಿಸಿದ ಈ ಸ್ಫೋಟದಲ್ಲಿ ಆರೋಪಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಮುಹಮ್ಮದ್ ಶಾರಿಕ್(24) ಹಾಗೂ ಆಟೊ ರಿಕ್ಷಾ ಚಾಲಕ ತೀವ್ರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಮಂಗಳೂರು| ಆಟೋ ರಿಕ್ಷಾದಲ್ಲಿ ಸ್ಫೋಟ ಪ್ರಕರಣದ ಆರೋಪಿ ಶಾರಿಕ್: ಎಡಿಜಿಪಿ

Similar News