ಪ್ರತಿ ಮನೆಗೆ 10 ಸಾವಿರ ಲೀಟರ್ ಉಚಿತ ನೀರು ನೀಡುವ ಬಗ್ಗೆ ಸರಕಾರ ಆಲೋಚಿಸಿಲ್ಲ: ಸಿಎಂ ಬೊಮ್ಮಾಯಿ

'ಬಿಜೆಪಿಯಲ್ಲಿ ಭಿನ್ನಮತವಿಲ್ಲ'

Update: 2022-11-23 07:04 GMT

ಚಿತ್ರದುರ್ಗ, ನ.23: ರಾಜ್ಯದಲ್ಲಿ ಪ್ರತಿ ಮನೆಗೆ 10 ಸಾವಿರ ಲೀಟರ್  ಉಚಿತವಾಗಿ ನೀರು ಕೊಡುವ ಬಗ್ಗೆ ಸರಕಾರ ಆಲೋಚನೆ ಮಾಡಿಲ್ಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಇಂದು ಮುರುಘಾ ಮಠದ ಆವರಣದ ಹೆಲಿಪ್ಯಾಡ್ ನಲ್ಲಿ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಬಿಜೆಪಿಯಲ್ಲಿ ಭಿನ್ನಮತವಿಲ್ಲ ಎಂದ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು ಮಂಡಿ ಶಸ್ತ್ರಚಿಕಿತ್ಸೆ ಒಳಗಾಗಿದ್ದು, ಆಸ್ಪತ್ರೆಯಲ್ಲಿದ್ದಾರೆ. ಹಾಗಾಗಿ ಕಾರ್ಯಕ್ರಮಗಳಿಗೆ ಹಾಜರಾಗುತ್ತಿಲ್ಲ  ಎಂದು ಸ್ಪಷ್ಟನೆ ನೀಡಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೆಡಿಎಸ್ ಗೆ ಬಹುಮತ ಬಂದರೆ ಅಲ್ಪಸಂಖ್ಯಾತರನ್ನು ಮುಖ್ಯಮಂತ್ರಿ ಮಾಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅದು ಅವರ ಪಕ್ಷದ ನಿರ್ಣಯ. ಅದರ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದರು.

ಶ್ರೀಘ್ರ ಕ್ರಮ: ಮುರುಘಾ ಮಠದ ಪ್ರಕರಣದ ಬಗ್ಗೆ ಜಿಲ್ಲಾಧಿಕಾರಿ ಸರಕಾರಕ್ಕೆ ವರದಿ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ವರದಿ ಕಾನೂನು ಇಲಾಖೆಯಲ್ಲಿದ್ದು, ಅತಿ ಶೀಘ್ರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಮುರುಘಾ ಶ್ರೀ ವಿರುದ್ಧ ಪಿತೂರಿ ನಡೆದಿದೆ ಎಂದು ಪ್ರಕರಣ ದಾಖಲಾಗಿ, ಮಾಜಿ ಶಾಸಕರ ಬಂಧನವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ನ್ಯಾಯಾಲಯದಲ್ಲಿದೆ ಪೊಲೀಸ್ ತನಿಖೆ ಮಾಡುತ್ತಿದ್ದಾರೆ ಎಂದರು.

Similar News