ಮತದಾರರ ಮಾಹಿತಿ ಕಳವು ಪ್ರಕರಣ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ BJP
Update: 2022-11-23 14:16 IST
ಬೆಂಗಳೂರು.ನ.23: ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಬುಧವಾರ ದೂರು ಸಲ್ಲಿಕೆ ಮಾಡಿದ್ದಾರೆ.
ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ನಿಯೋಗವು, ನಗರದ ಶೇಷಾದ್ರಿ ರಸ್ತೆಯಲ್ಲಿರುವ ಶೇಷಾದ್ರಿ ರಸ್ತೆಯಲ್ಲಿರುವ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿ, ದೂರು ನೀಡಿದ್ದು, ‘ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ವ್ಯಾಪ್ತಿಯ ಮೂವರು ಕಂದಾಯ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.