ಶಿವಮೊಗ್ಗದ ಹರ್ಷ ಕೊಲೆ ಪ್ರಕರಣ: ಆರೋಪಿಗೆ ಷರತ್ತು ಬದ್ಧ ಜಾಮೀನು ನೀಡಿದ ಎನ್‌ಐಎ ವಿಶೇಷ ಕೋರ್ಟ್

Update: 2022-11-23 13:09 GMT

ಬೆಂಗಳೂರು, ನ.23: ಶಿವಮೊಗ್ಗ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿ ಸೈಯದ್ ನದೀಮ್ ಎಂಬಾತನಿಗೆ ಬೆಂಗಳೂರಿನ ಎನ್‌ಐಎ (NIA) ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ನೀಡಿದೆ. 

ಹರ್ಷನನ್ನು ಕೊಲೆ ಮಾಡಿದ ಆರೋಪಿಗೆ ಆಶ್ರಯ ನೀಡಿದ ಆರೋಪದಡಿಯಲ್ಲಿ ಸೈಯದ್ ನದೀಮ್‌ನನ್ನು ಬಂಧಿಸಿದ್ದ ಪೊಲೀಸರು, ಕೇಸ್‌ನಲ್ಲಿ 9ನೇ ಆರೋಪಿ ಎಂದು ಪರಿಗಣಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಸಿ.ಎಂ.ಗಂಗಾಧರ ಅವರಿದ್ದ ನ್ಯಾಯಪೀಠ, ಹಲವು ಷರತ್ತುಗಳನ್ನು ವಿಧಿಸಿ ಆರೋಪಿಗೆ ಜಾಮೀನು ಮಂಜೂರು ಮಾಡಿದೆ. ಫೆಬ್ರವರಿ 20ರಂದು ರಾತ್ರಿ 9 ಗಂಟೆ ಸಮಯದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನನ್ನು ದುಷ್ಕರ್ಮಿಗಳು ಮಾರಕಾಸ್ತçಗಳಿಂದ ಹಲ್ಲೆ ಮಾಡಿ ಹತ್ಯೆ ಮಡಲಾಗಿತ್ತು. 

ಈ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಈವರೆಗೂ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣವನ್ನು ರಾಜ್ಯ ಸರಕಾರ ಎನ್‌ಐಎಗೆ ವಹಿಸಿದ್ದು, ತನಿಖೆ ಮುಂದುವರಿದಿದೆ. ಅರ್ಜಿದಾರ ಸೈಯದ್ ನದೀಮ್ ಪರವಾಗಿ ನ್ಯಾಯವಾದಿ ರಹಮತ್ ಉಲ್ಲಾ ಕೊತ್ವಾಲ್ ಅವರು ವಾದ ಮಂಡನೆ ಮಾಡಿದರು.

Similar News