ಫಿಫಾ ವಿಶ್ವಕಪ್: ನಾಲ್ಕು ಬಾರಿಯ ಚಾಂಪಿಯನ್ ಜರ್ಮನಿಗೆ ಸೋಲುಣಿಸಿದ ಜಪಾನ್

Update: 2022-11-23 15:11 GMT

ದೋಹಾ, ನ.23: ಫಿಫಾ ವಿಶ್ವಕಪ್‌ನ ಗ್ರೂಪ್ ಇ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಜಪಾನ್ ತಂಡ ನಾಲ್ಕು ಬಾರಿಯ ಚಾಂಪಿಯನ್ ಜರ್ಮನಿ ತಂಡವನ್ನು 2-1 ಅಂತರದಿಂದ ಸೋಲಿಸಿ ಶಾಕ್ ನೀಡಿದೆ.

ಖಲೀಫ ಇಂಟರ್‌ನ್ಯಾಶನಲ್ ಸ್ಟೇಡಿಯಮ್‌ನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಜರ್ಮನಿ ತಂಡ ಈಲ್ಕೊ ಗುಂಡವಾನ್ 33ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್ ಮೂಲಕ ಗಳಿಸಿದ ಗೋಲು ನೆರವಿನಿಂದ 1-0 ಮುನ್ನಡೆ ಸಾಧಿಸಿತು.

75ನೇ ನಿಮಿಷದಲ್ಲಿ ಗೋಲು ಗಳಿಸಿದ ಬದಲಿ ಆಟಗಾರ ರಿತ್ಸು ಡೊಯಾನ್,  ಜಪಾನ್ 1-1ರಿಂದ ಸಮಬಲ ಸಾಧಿಸಲು ನೆರವಾದರು.

 83ನೇ ನಿಮಿಷದಲ್ಲಿ ಗೋಲು ಗಳಿಸಿದ ಟಕುಮಾ ಅಸಾನೊ ಜಪಾನ್ 2-1 ಮುನ್ನಡೆ ಸಾಧಿಸಿ ಪಂದ್ಯ ಗೆಲ್ಲಲು ಪ್ರಮುಖ ಪಾತ್ರವಹಿಸಿದರು.
 

Similar News