×
Ad

ಧರ್ಮಸ್ಥಳದಲ್ಲಿ ರಸ್ತೆ ಅಪಘಾತ: ಓರ್ವ ಮೃತ್ಯು, ಏಳು ಮಂದಿಗೆ ಗಂಭೀರ ಗಾಯ

Update: 2022-11-23 21:16 IST

ಬೆಳ್ತಂಗಡಿ: ರಸ್ತೆ ಅಪಘಾತದಿಂದ ಓರ್ವ ಮೃತಪಟ್ಟು, ಏಳು ಮಂದಿ ಗಂಭೀರ ಗಾಯಗೊಂಡು ಘಟನೆ ಧರ್ಮಸ್ಥಳದ ಕುದ್ರಾಯದಲ್ಲಿ ಇಂದು ಸಂಜೆ ನಡೆದಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸುತ್ತಿದ್ದ ಮಂಡ್ಯ ಜಿಲ್ಲೆಯ ಹತ್ತು ಮಂದಿಯ ಕುಟುಂಬ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ವಾಹನವನ್ನು ರಸ್ತೆಯ ಬಲಕ್ಕೆ ಪಾರ್ಕ್ ಮಾಡಿ ನಿಲ್ಲಿಸಿ ಇಳಿದು ಅಂಗಡಿ ಹೋಗುತ್ತಿದ್ದ ವೇಳೆ ಧರ್ಮಸ್ಥಳ ಡಿಪೋದಿಂದ ಮೈಸೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂತಿದ್ದವರಿಗೆ ಹಾಗೂ ಬೊಲೋರೊ ವಾಹನಕ್ಕೆ ಢಿಕ್ಕಿ ಹೊಡೆದಿದೆ.

ಈ ವೇಳೆ ಮಂಡ್ಯ ಜಿಲ್ಲೆಯ ಚೆನ್ನಸಾಂದ್ರ ನಿವಾಸಿ ಮಾಹದೇವ (63) ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಮಹಿಳೆಯರು, ಓರ್ವ ಗಂಡಸು, ಒಂದು ಮಗು ಸೇರಿ ಏಳು ಮಂದಿಗೆ ಗಂಭೀರ ಗಾಯವಾಗಿದ್ದು, ಇವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Similar News