ಕೋಟಿ ಚೆನ್ನಯ್ಯ ಥೀಂ ಪಾರ್ಕ್‌ನಲ್ಲಿ ಮಾಸಿಕ ಕಾರ್ಯಕ್ರಮಗಳ ಉದ್ಘಾಟನೆ

Update: 2022-11-23 15:58 GMT

ಉಡುಪಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ, ಕೋಟಿ ಚೆನ್ನಯ್ಯ ಅಭಿವೃದ್ಧಿ ಸಮಿತಿ ಹಾಗೂ ಯಕ್ಷ ರಂಗಾಯಣ ಕಾರ್ಕಳ ಇವರ ಸಹಯೋಗದೊಂದಿಗೆ ಕಾರ್ಕಳ ಕೋಟಿ ಚೆನ್ನಯ್ಯ ಥೀಂ ಪಾರ್ಕ್‌ನಲ್ಲಿ ನಡೆಯ ಲಿರುವ ಮಾಸಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ನ.26ರಂದು ಸಂಜೆ 5:30ಕ್ಕೆ ನಡೆಯಲಿದೆ.

ಮೊದಲ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಅಂದು ಸಂಜೆ 6 ರಿಂದ ರಾತ್ರಿ 9 ರವರೆಗೆ ‘ರಾಮ ನಿರ್ಯಾಣ’ ಯಕ್ಷಗಾನ ತಾಳಮದ್ದಳೆಯನ್ನು ಏರ್ಪಡಿಸ ಲಾಗಿದೆ. ಪ್ರತಿ ತಿಂಗಳು ಥೀಂಪಾರ್ಕ್‌ನಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಚಟುವಟಿಕೆಗಳು ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Similar News