ಕನ್ನಡ ಪುಸ್ತಕ ಪ್ರದರ್ಶನ: ಆಕ್ಷೇಪಣೆ ಆಹ್ವಾನ
Update: 2022-11-23 21:54 IST
ಉಡುಪಿ : ಸಾರ್ವಜನಿಕ ಗ್ರಂಥಾಲಯ ಇಲಾಖೆಯ ವತಿಯಿಂದ 2020ನೇ ಸಾಲಿನಲ್ಲಿ ಪ್ರಥಮ ಮುದ್ರಣಗೊಂಡ ಏಕಗವಾಕ್ಷಿ ಮತ್ತು ಪ್ರಸಕ್ತ ಸಾಲಿನಲ್ಲಿ ಪ್ರಥಮ ಮುದ್ರಣಗೊಂಡ ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆ ಯಡಿ ಯಲ್ಲಿ ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸ್ವೀಕರಿಸಲಾದ ಪುಸ್ತಕಗಳಲ್ಲಿ ಆಯ್ಕೆಯಾದ ಹಾಗೂ ಆಯ್ಕೆಯಾಗದ ಕನ್ನಡ ಪುಸ್ತಕಗಳ ಪ್ರದರ್ಶನವು ಬೆಂಗಳೂರು ಹಂಪಿನಗರದ ನಗರ ಕೇಂದ್ರ ಗ್ರಂಥಾಲಯದ ಗ್ರಂಥಾಂಗಣದಲ್ಲಿ ನಡೆಯಲಿದೆ.
ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸಲ್ಲಿಸಿದ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು, ವಿತರಕರು ಮತ್ತು ಪುಸ್ತಕ ಮಾರಾಟಗಾರರು ಆಕ್ಷೇಪಣೆಗಳಿದ್ದಲ್ಲಿ ನ.30ರೊಳಗೆ ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯಗೋಪುರ, ಡಾ. ಅಂಬೇಡ್ಕರ್ ವೀದಿ, ಬೆಂಗಳೂರು ಇವರಿಗೆ ಲಿಖಿತರೂಪದಲ್ಲಿ ಸಲ್ಲಿಸಬಹುದು ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.