ಉಡುಪಿ: ಪ್ರತ್ಯೇಕ ಘಟನೆ; ಇಬ್ಬರು ನಾಪತ್ತೆ
Update: 2022-11-23 21:58 IST
ಉಡುಪಿ, ನ.23: ಉಡುಪಿ ತಾಲೂಕು ಕೊರಂಗ್ರಪಾಡಿ ಗ್ರಾಮದ ಬೊಮ್ಮನ ಪಾದೆ ನಿವಾಸಿ ಪ್ರಸನ್ನ (43) ಎಂಬವರು 2021ರ ಅ.26ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ.
ಉಡುಪಿ: ನಗರದ ಅಪಾರ್ಟ್‌ಮೆಂಟ್ ಒಂದರಲ್ಲಿ ವಾಸವಿದ್ದ ರಮಾನಾಥ ನಾಯಕ್ (57) ಎಂಬವರು 2021ರ ಮಾರ್ಚ್ 24ರಂದು ಮನೆಯಿಂದ ಹೊರಗೆ ಹೋದವರು ಮರಳಿ ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 10 ಸೆ.ಮೀ. ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ಕೊಂಕಣಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ.
ಇವರಿಬ್ಬರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸ ಬಹುದು ಎಂದು ಪ್ರಕಟಣೆ ತಿಳಿಸಿದೆ.