ಒತ್ತುವರಿ ತೆರವು ಮಾಡದೇ ಸಹಕರಿಸಿದ ಆರೋಪ: ಕೆ.ಆರ್. ಪುರಂ ತಹಶೀಲ್ದಾರ್ ಅಜಿತ್ ರೈ ಅಮಾನತು

Update: 2022-11-24 11:40 GMT

ಬೆಂಗಳೂರು, ನ. 24: ಇತ್ತೀಚಿಗೆ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಮಳೆಯಿಂದಾಗಿ ಮುಳುಗಡೆ ಆಗಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ‘ರೈನ್ ಬೋ ಲೇಔಟ್’ನ ಒತ್ತುವರಿದಾರರ ವಿರುದ್ಧ ಕ್ರಮ ಕೈಗೊಳ್ಳದ ಆರೋಪದಡಿ ತಹಶೀಲ್ದರ್‍ನನ್ನು ಅಮಾನತು ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಒತ್ತುವರಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯವಹಿಸಿದ ಆರೋಪದಲ್ಲಿ ಬೆಂಗಳೂರು ಪೂರ್ವ ತಾಲೂಕು ಕೆಆರ್ ಪುರಂ ತಹಶೀಲ್ದಾರ್ ಎಸ್.ಅಜಿತ್ ಕುಮಾರ್ ರೈ ಅವರನ್ನು ಅಮಾನತು ಮಾಡಲಾಗಿದೆ.

ಸರಿಯಾದ ರೀತಿಯಲ್ಲಿ ವಿಚಾರಣೆ ಮಾಡದೇ ಒತ್ತುವರಿದಾರರಿಗೆ ಸಹಕರಿಸಿದ್ದು, ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅವರನ್ನು ಅಮಾನತು ಮಾಡಿ ಕ್ರಮ ಕೈಗೊಂಡಿದೆ ಎಂದು ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಜಿ.ಎನ್.ಸುಶೀಲಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿಗೆ ಮಳೆಯಿಂದ ಸರ್ಜಾಪುರ ರಸ್ತೆಯಲ್ಲಿರುವ ರೈನ್ ಬೋ ಡ್ರೈವ್ ಲೇಔಟ್ ಜಲಾವೃತಗೊಂಡಿತ್ತು. ರೈನ್‍ಬೋಡ್ರೈವ್ ಲೇಔಟ್‍ನಲ್ಲಿ ಜಿಲ್ಲಾಡಳಿತಸರ್ವೇನಡೆಸಿದ್ದು, ಕಾಲುವೆ ಒತ್ತುವರಿ ಮಾಡಿ ವಿಲ್ಲಾಗಳನ್ನು ನಿರ್ಮಾಣ ಮಾಡಿರುವುದು ಬೆಳಕಿಗೆ ಬಂದಿತ್ತು. ಆನಂತರ ವಿಲ್ಲಾಗಳನ್ನು ತೆರವುಗೊಳಿಸುವಂತೆ ಮಾಲಕರಿಗೆ ನೋಟಿಸ್ ನೀಡಲಾಗಿತ್ತು. ಬಳಿಕ, ಈ ಬಗ್ಗೆ ಕ್ರಮ ಜರುಗಿಸಲು ತಹಶೀಲ್ದಾರ್ ವಿಫಲರಾಗಿದ್ದಾರೆ ಎಂದು ತಿಳಿದು ಬಂದಿದೆ.

Similar News