25 ವರ್ಷಗಳಲ್ಲಿ 31 ಸಾವಿರ ಪ್ರಕರಣ ಇತ್ಯರ್ಥ: ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು

Update: 2022-11-24 13:42 GMT

ಬೆಂಗಳೂರು, ನ.24: ‘ಇಪ್ಪತ್ತೈದು ವರ್ಷಗಳಲ್ಲಿ ಸುಮಾರು 31 ಸಾವಿರಕ್ಕೂ ಅಧಿಕ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ’ ಎಂದು ಕರ್ನಾಟಕ ರಾಜ್ಯ ಮಹಿಳಾ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ‘ಮಹಿಳೆಯರ ಮೇಲೆ ಯಾವುದೇ ರೀತಿಯ ಅನ್ಯಾಯದ ವಿರುದ್ದ ರಕ್ಷಣೆ ಒದಗಿಸುವ ಮಹತ್ವದ ಜವಾಬ್ದಾರಿಯೂ ಆಯೋಗಕ್ಕಿದೆ. ಇಂತಹ ಆಯೋಗ 25 ವರ್ಷಗಳಲ್ಲಿ ರಾಜ್ಯದ ಮಹಿಳೆಯರ ರಕ್ಷಣೆಯಲ್ಲಿ ಪ್ರಮುಖ ಪಾತ್ರವಹಿಸಿದ್ದು, ಇದುವರೆಗೂ 31 ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಗೊಳಿಸಿದೆ’ ಎಂದು ಹೇಳಿದರು.

ಮಹಿಳೆಯರ ಸರ್ವತೋಮುಖ ಅಭಿವೃದ್ದಿಯ ನಿಟ್ಟಿನಲ್ಲಿಯೂ ಆಯೋಗ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಶ್ವ ವಿದ್ಯಾಲಯ ಹಾಗೂ ಶಿಕ್ಷಣ ಸಂಸ್ಥೆಗಳು ಮತ್ತು ಕಾಲೇಜು ಶಿಕ್ಷಣ ಸಂಸ್ಥೆಗಳೊಂದಿಗೆ ಕಾನೂನು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಮಹಿಳೆಯರಿಗೆ ಸಂಬಂಧಿಸಿದ ವಿವಿಧ ಕಾನೂನುಗಳ ಬಗ್ಗೆ ಅರಿವನ್ನು ಮೂಡಿಸಲಾಗುತ್ತಿದೆ ಎಂದರು.

ನಾಳೆ ರಜತ ಮಹೋತ್ಸವ: ಆಯೋಗದ ತನ್ನ ರಜತ ಮಹೋತ್ಸವ ಸಮಾರಂಭ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಾಳೆ(ನ.25) ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. 

Similar News