×
Ad

ಮಂಗಳೂರು | ಅಸ್ಥಿಪಂಜರ ಪತ್ತೆ: ಪೋಲಿಸರಿಂದ ಸ್ಥಳ ಪರಿಶೀಲನೆ

Update: 2022-11-25 11:09 IST

ಮಂಗಳೂರು: ಬರ್ಕೆ ಅರಕ್ಷಕ ಠಾಣೆಯ ವ್ಯಾಪ್ತಿಯಲ್ಲಿ ಮನುಷ್ಯನ ಅಸ್ಥಿಪಂಜರ ಶುಕ್ರವಾರ ಪತ್ತೆಯಾಗಿರುವುದಾಗಿ ವರದಿಯಾಗಿದೆ.

ಬರ್ಕೆ ಅರಕ್ಷಕ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮಣ್ಣಗುಡ್ಡೆ ಹೋಟೆಲ್ ದುರ್ಗಮಹಲ್ ಮುಂಭಾಗದ ರಸ್ತೆ ಸಮೀಪದ ಪಾಲುಬಿದ್ದ ಮನೆಯ ಅಂಗಳಲದಲ್ಲಿ ಅಸ್ಥಿಪಂಜರ ಪತ್ತೆಯಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಮಾಹಿತಿ ತಿಳಿದ ತಕ್ಷಣ  ಬರ್ಕೆ ಠಾಣಾ ಪೋಲಿಸರು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Similar News