×
Ad

ಉಡುಪಿ ಜಿಲ್ಲಾ ಯುವ ಮಂಡಳ ಪ್ರಶಸ್ತಿ: ಅರ್ಜಿ ಆಹ್ವಾನ

Update: 2022-11-25 20:44 IST

ಉಡುಪಿ, ನ.25: ನೆಹರು ಯುವಕೇಂದ್ರದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ ಯುವಕ-ಯುವತಿ ಮಂಡಳಿಗಳಿಂದ ಅರ್ಜಿ ಗಳನ್ನು ಆಹ್ವಾನಿಸಲಾಗಿದೆ.

ಜಿಲ್ಲಾ ನೋಂದಾಣಾಧಿಕಾರಿಗಳ ಕಚೇರಿಯಲ್ಲಿ ನೋಂದಾವಣೆಯಾಗಿ, ನೆಹರು ಯುವ ಕೇಂದ್ರದಲ್ಲಿ ಸಂಯೋಜನೆ ಹೊಂದಿರುವ, 2021 ಎ.1ರಿಂದ 2022ರ ಮಾ.31ರೊಳಗೆ ಗ್ರಾಮ, ಪಟ್ಟಣ ಮತ್ತು ತಾಲೂಕು ಅಭಿವೃದ್ಧಿಗಾಗಿ ಜನಪರ ಕಾರ‌್ಯಕ್ರಮಗಳನ್ನು ನಡೆಸಿರುವ ಜಿಲ್ಲೆಯ ಯುವಕ-ಯುವತಿ ಮಂಡಳಿಗಳು ಸ್ಪರ್ಧೆಯಲ್ಲಿ ಭಾಗವಹಿಸ ಬಹುದಾಗಿದೆ. 

ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗುವ ಯುವ ಮಂಡಳಗಳು 25,000 ರೂ. ಬಹುಮಾನ, ಪ್ರಶಸ್ತಿ ಪತ್ರದ ಜೊತೆಗೆ ರಾಜ್ಯ ಮಟ್ಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲು ಅರ್ಹತೆ ಪಡೆದುಕೊಳ್ಳಲಿವೆ. 

ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಸಮನ್ವಯಾಧಿಕಾರಿ, ನೆಹರು ಯುವ ಕೇಂದ್ರ, ಜಿಲ್ಲಾಧಿಕಾರಿ ಕಚೇರಿ ಆವರಣ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574992ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. 

Similar News