ಮಂಗಳೂರು ಆಟೋ ರಿಕ್ಷಾದಲ್ಲಿ ಸ್ಫೋಟ ಪ್ರಕರಣ: ತನಿಖೆಗೆ ಮುಂದಾದ NIA

Update: 2022-11-26 02:58 GMT

ಬೆಂಗಳೂರು: ಕೇಂದ್ರ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಮಂಗಳೂರು ಆಟೋ ರಿಕ್ಷಾದಲ್ಲಿ ನಡೆದ ಸ್ಫೋಟ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (The National Investigation Agency (NIA) ಕೈಗೆತ್ತಿಕೊಳ್ಳಲಿದೆ ಎಂದು ಕರ್ನಾಟಕ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ನ.19ರಂದು ಮಂಗಳೂರಿನಲ್ಲಿ ಆಟೊ ರಿಕ್ಷಾದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಚಾಲಕ ಹಾಗೂ ಪ್ರಯಾಣಿಕ ಶರೀಕ್ (24) ಎಂಬಾತ ಗಾಯಗೊಂಡಿದ್ದಾರೆ. ಪ್ರಯಾಣಿಕ ಈ ಪ್ರಕರಣದ ಪ್ರಮುಖ ಆರೋಪಿಯೂ ಆಗಿದ್ದಾನೆ.

ಈ ಸ್ಫೋಟ ಘಟನೆ ಬಗ್ಗೆ NIA ವಿಚಾರಣೆ ನಡೆಸುವಂತೆ ರಾಜ್ಯ ಸರ್ಕಾರ ಮಾಡಿದ ಶಿಫಾರಸ್ಸನ್ನು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಒಪ್ಪಿಕೊಂಡಿದ್ದು, ತನಿಖೆ ಆರಂಭಿಸುವಂತೆ NIAಗೆ ಸೂಚನೆ ನೀಡಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.

ಕಂಕನಾಡಿ ಠಾಣೆ ವ್ಯಾಪ್ತಿಯಲಿ ಈ ಘಟನೆ ನಡೆದಿದ್ದು, ಈಗಾಗಲೇ ಪ್ರಾಥಮಿಕ ತನಿಖೆಯಲ್ಲಿ ಲಭ್ಯವಾಗಿರುವ ಪುರಾವೆಗಳು ಮತ್ತು ಮಾಹಿತಿಗಳ ಹಿನ್ನೆಲೆಯಲ್ಲಿ ಪ್ರಕರಣವನ್ನು NIAಗೆ ವರ್ಗಾಯಿಸುವ ಸಂಬಂಧ ಶಿಫಾರಸ್ಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿತ್ತು ಎಂದು ಪ್ರಕಟಣೆಯಲ್ಲಿ ವಿವರಿಸಿದ್ದಾರೆ. ಈ ಬಗ್ಗೆ hindustantimes.com ವರದಿ ಮಾಡಿದೆ. 

Similar News